
ತಾಲ್ಲೂಕನ್ನು ಬರ ಪೀಡಿತ ಪಟ್ಟಿಯಿಂದ ಕೈಬಿಟ್ಟಿರುವುದನ್ನು ಖಂಡಿಸಿ ಪಟ್ಟಣ ಬಂದ್
ಕೂಡ್ಲಿಗಿ: ತಾಲ್ಲೂಕನ್ನು ಬರ ಪೀಡಿತ ಪಟ್ಟಿಯಿಂದ ಕೈಬಿಟ್ಟಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳಿಂದ ಸೋಮವಾರ ಪಟ್ಟಣ ಬಂದ್‌ಗೆ ಕರೆ ನೀಡಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಅಖಿಲ ಕರ್ನಾಟಕ ರೈತ ಸಂಘ ರಾಜ್ಯ ಉಪಾಧ್ಯಕ್ಷ ದೇವರ ಮಹೇಶ, ತಾಲ್ಲೂಕಿನಲ್ಲಿ ತೀವ್ರ ಮಳೆ ಅಭಾವವಿದ್ದು, ಬೆಳೆಗಳು ಒಣಗಿ ಹೋಗುತ್ತಿವೆ. ಇದರಿಂದ ರೈತರು ಸಾಕಷ್ಟು ನಷ್ಟ ಅನಿಭವಿಸುತ್ತಿದ್ದರೂ ಸರ್ಕಾರ ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿದೆ. ಇದನ್ನು ಖಂಡಿಸಿ ಸೋಮವಾರ ಪಟ್ಟಣ ಬಂದ್ ಮಾಡಲಾಗುತ್ತಿದೆ. ಇದಕ್ಕೆ ವಿವಿಧ ಸಂಘಟನೆಗಳು ಕೈಜೋಡಿಸಿದ್ದು, ಎಲ್ಲರು ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದರೆ.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260831-25-1427301573