
ಬಾಟಲಿ ಮುಟ್ಟಿದ್ದಕ್ಕೆ ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ: ಶಿಕ್ಷಕನಿಗೆ ನೋಟಿಸ್
ನವದೆಹಲಿ: ತನ್ನ ಬಾಟಲಿಯಿಂದ ನೀರು ಕುಡಿದಿದ್ದಾನೆ ಎಂದು ಶಿಕ್ಷಕರೊಬ್ಬರು ದಲಿತ ಸಮುದಾಯದ ವಿದ್ಯಾರ್ಥಿ ಹಲ್ಲೆ ಮಾಡಿ, ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಶಿಕ್ಷಕನಿಗೆ, ಪೊಲೀಸ್ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.
ದಲಿತ ಸಮುದಾಯದ 4ನೇ ತರಗತಿಯ ವಿದ್ಯಾರ್ಥಿ ತನ್ನ ಬಾಟಲಿಯಿಂದ ನೀರು ಕುಡಿದಿದ್ದಾನೆ ಎಂದು ಶಿಕ್ಷಕ ಕೋಪಗೊಂಡು ಜಾತಿ ನಿಂದನೆ ಮಾಡಿ, ಹಲ್ಲೆಗೆ ಮುಂದಾಗಿದ್ದಾರೆ. ಜುಲೈ 28ರಂದು ಶಿವಪುರಿ ಜಿಲ್ಲೆಯ ಉಕಾವಲ್ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಮಾಧ್ಯಮ ವರದಿಯನ್ನು ಆಧರಿಸಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಮಾನವ ಹಕ್ಕುಗಳ ಆಯೋಗ ತಿಳಿಸಿದೆ.
ಈ ಘಟನೆ ಸಂಬಂಧ ರಾಜ್ಯ ಮುಖ್ಯಕಾರ್ಯದರ್ಶಿ, ಶಿವಪುರಿಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ನೋಟಿಸ್ ಜಾರಿ ಮಾಡಿದೆ. ಎರಡು ವಾರಗಳಲ್ಲಿ ಹೆಚ್ಚಿನ ಮಾಹಿತಿಗೆ ಕೋರಲಾಗಿದೆ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ತಿಳಿಸಿದೆ.
Tags
Nation