
ಹೊರ ನಡೆಯಲು ಹೊರಟ್ಟಿಗೆ ಹೇಳಿದ್ದೆವು: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್
ಬೆಂಗಳೂರು: ‘ಸಭಾಪತಿ ಸ್ಥಾನದಿಂದ ಗೌರವದಿಂದ ಹೊರಗೆ ನಡೆಯಿರಿ ಎಂದು ನಾವು ಬಸವರಾಜ ಹೊರಟ್ಟಿಗೆ ಹೇಳಿದ್ದೆವು. ಇಲ್ಲದೇ ಇದ್ದರೆ ಅವಿಶ್ವಾಸ ನಿರ್ಣಯ ಮಂಡಿಸ ಲೇಬೇಕಿತ್ತು’ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದರು.
‘ರಾಜೀನಾಮೆ ನೀಡುವಂತೆ ಹೊರಟ್ಟಿಯವರಿಗೆ ಬೆದರಿಕೆ ಹಾಕಿದ್ದರು’ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಹರಿಪ್ರಸಾದ್, ‘ಬಿಜೆಪಿಯವರಿಗೆ ಮಾನ ಮರ್ಯಾದೆ ಇದ್ದರೆ ಸುಮ್ಮನಿರುವುದು ಒಳ್ಳೆಯದು’ ಎಂದರು.
‘ಈ ಹಿಂದೆ ಪ್ರತಾಪ್ ಚಂದ್ರ ಶೆಟ್ಟಿ ಸಭಾಪತಿ ಆಗಿದ್ದಾಗ ಅವರನ್ನು ತೆಗೆಯಬೇಕೆಂದು ಇದೇ ಬಸವರಾಜ ಹೊರಟ್ಟಿ ಮೊದಲು ಸಹಿ ಹಾಕಿದ್ದರು’ ಎಂದರು. ಮಹಿಳಾ ಸಚಿವರ ನೇಮಕ ಆಗದ ವಿಚಾರದ ಬಗ್ಗೆ ಮಾತನಾಡಿದ ಅವರು, ‘ಯಾರನ್ನು ಮಾಡಬೇಕೆಂದು ಚರ್ಚೆ ನಡೆಯುತ್ತಿದೆ’ ಎಂದರು.
ಅನುಮಾನಕ್ಕೆ ಕಾರಣ: ‘ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಒಂದು ಕೋಟಿಗೂ ಹೆಚ್ಚು ಜನರನ್ನು ಹೊರಗಿಡಲಾಗಿದೆ. ಇದು ಅನುಮಾನಕ್ಕೆ ಕಾರಣವಾಗಿದೆ’ ಎಂದು ಹರಿಪ್ರಸಾದ್ ಹೇಳಿದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260809-51-177795016