
ಗದಗ: ಸಚಿವ ರಾಯರಡ್ಡಿಯಿಂದ ರಾಷ್ಟ್ರಧ್ವಜಾರೋಹಣ, ಸ್ವಾತಂತ್ರ್ಯೋತ್ಸವದ ಸಂದೇಶ
ಗದಗ: ಸ್ವಾತಂತ್ರ್ಯೋತ್ಸವದ ಅಂಗವಾಗಿ ನಗರದ ಕೆ.ಎಚ್. ಪಾಟೀಲ ಕ್ರೀಡಾಂಗಣದಲ್ಲಿ ಶನಿವಾರ ಸಚಿವ ಬಸವರಾಜ ರಾಯರಡ್ಡಿ ಅವರು ಧ್ವಜಾರೋಹಣ ನೆರವೇರಿಸಿದರು.
ರಾಷ್ಟ್ರಧ್ವಜ ಹಿಡಿದು ವಿವಿಧ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಆಕರ್ಷಕ ಪಥಸಂಚಲನ ನಡೆಯಿತು. ಸಚಿವರ ಭಾಷಣ ಮುಗಿಯುವವರೆಗೆ ಪಥ ಸಂಚಲನದಲ್ಲಿ ಪಾಲ್ಗೊಂಡವರು ಉರಿ ಬಿಸಿಲಿನಲ್ಲಿ ನಿಲ್ಲುವಂತಾಯಿತು.
ಸಚಿವ ಬಸವರಾಜ ರಾಯರಡ್ಡಿ ಅವರು, ಸ್ವಾತಂತ್ರ್ಯೋತ್ಸವದ ಮಹತ್ವ, ಜಿಲ್ಲೆ ಹಾಗೂ ಸರ್ಕಾರದ ಸಾಧನೆ, ಅಭಿವೃದ್ಧಿ ಯೋಜನೆಗಳ ಕುರಿತು ಮಾತನಾಡಿದರು. ನಂತರ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.