
ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿದ್ದ ವಾಟಾಳ್ ನಾಗರಾಜ್ ಪೊಲೀಸರ ವಶಕ್ಕೆ
ಬೆಂಗಳೂರು: ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿದ್ದ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದರು.
ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದ ಬಳಿ ಸದಾಶಿವನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದರು.
ಬಂದ್ ಪ್ರಯುಕ್ತ ಪುರಭವನದಿಂದ ಒಕ್ಕೂಟವು ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆಗೆ ಮುನ್ನವೇ ನಾಗರಾಜ್ ಪೊಲೀಸರ ವಶದಲ್ಲಿರುವುದರಿಂದ ಮೆರವಣಿಗೆ ನಡೆಯುವುದು ಅನಿಶ್ಚಿತವಾಗಿದೆ.