ಸರ್ಕಾರಿ ಶಾಲೆ ಅವ್ಯವಸ್ಥೆ ಕಂಡು ಬೆರಗಾದ ಅಭಿಜಿತ್ ದೀಪ್ಕೆ

ಸರ್ಕಾರಿ ಶಾಲೆ ಅವ್ಯವಸ್ಥೆ ಕಂಡು ಬೆರಗಾದ ಅಭಿಜಿತ್ ದೀಪ್ಕೆ

ಸರ್ಕಾರಿ ಶಾಲೆ ಅವ್ಯವಸ್ಥೆ ಕಂಡು ಬೆರಗಾದ ಅಭಿಜಿತ್ ದೀಪ್ಕೆ

ಲಾತೂರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಔಸಾ ಪ್ರದೇಶದಲ್ಲಿರುವ ಸರ್ಕಾರಿ ಶಾಲೆಯು ಅವ್ಯವಸ್ಥೆಯ ಗೂಡಾಗಿದ್ದು, ಅಕ್ರಮ ಚಟುವಟಿಕೆಗಳು ನಡೆಯುತ್ತಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಆರೋಪಿಸಿದ್ದಾರೆ.

‘ಸ್ಕೂಲ್ ಥೀಕ್ ಕರೋ’ (ಶಾಲೆಗಳನ್ನು ಸರಿಪಡಿಸಿ) ಅಭಿಯಾನದ ಭಾಗವಾಗಿ ಗುರುವಾರ ಸರ್ಕಾರಿ ಶಾಲೆಗೆ ಭೇಟಿ ನೀಡಿರುವ ಅವರು ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ವಿಡಿಯೊ ಹಂಚಿಕೊಂಡಿದ್ದಾರೆ.

‘ನಾನು ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಇತರ ಶಾಲೆಗಳ ವಿದ್ಯಾರ್ಥಿಗಳನ್ನು ಕೊಠಡಿಯಲ್ಲಿ ಕೂರಿಸಲಾಗಿತ್ತು. ಆದರೆ, ಅಲ್ಲಿದ್ದ ವಿದ್ಯಾರ್ಥಿಗಳ ಹೆಸರುಗಳು ಶಾಲೆಯ ಅಧಿಕೃತ ದಾಖಲಾತಿಗಳಲ್ಲಿ ನೋಂದಣಿಯಾಗಿರಲಿಲ್ಲ’ ಎಂದು ದೀಪ್ಕೆ ಆರೋಪಿಸಿದ್ದಾರೆ.

‘ಔಸಾದಲ್ಲಿರುವ ಈ ಸರ್ಕಾರಿ ಶಾಲೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇರಲಿಲ್ಲ. ನಾನು ಬರುವ ಕೆಲವೇ ಸಮಯದ ಮೊದಲು ಅಲ್ಲಿನ ಶೌಚಾಲಯಗಳನ್ನು ಸ್ವಚ್ಛಗೊಳಿಸಲಾಗಿತ್ತು’ ಎಂದು ದೀಪ್ಕೆ ಪತ್ರಕರ್ತರಿಗೆ ತಿಳಿಸಿದ್ದಾರೆ.

‘ತಮ್ಮ ಭೇಟಿ ಕುರಿತು ಮಾಹಿತಿ ತಿಳಿದ ಬಳಿಕ ಮಧ್ಯಾಹ್ನದ ಬಿಸಿಯೂಟಕ್ಕಾಗಿ ಹೊಸ ತಟ್ಟೆಗಳನ್ನು ತರಿಸಲಾಗಿತ್ತು. ಶಾಲೆಯ ಆವರಣವನ್ನು ಕೇವಲ ಒಂದು ದಿನದ ಹಿಂದಷ್ಟೇ ಸ್ವಚ್ಛಗೊಳಿಸಲಾಗಿತ್ತು’ ಎಂದು ಅವರು ಆರೋಪಿಸಿದ್ದಾರೆ.

‘ಶಾಲೆಯ ಆವರಣದಲ್ಲಿ ಮದ್ಯದ ಬಾಟಲಿಗಳು ಪತ್ತೆಯಾಗಿದ್ದು, ಅಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಸಾಧ್ಯತೆಯನ್ನು ಇದು ಸೂಚಿಸುತ್ತದೆ’ ಎಂದು ದೀಪ್ಕೆ ಹೇಳಿದ್ದಾರೆ.

ಆದರೆ, ದೀಪ್ಕೆ ಮಾಡಿರುವ ಆರೋಪಗಳನ್ನು ಶಾಲಾ ಆಡಳಿತ ಮಂಡಳಿ ತಳ್ಳಿಹಾಕಿದೆ. ಶಾಲೆಯ ಆವರಣದಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳು ನಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ