ದೇವನಹಳ್ಳಿ | ಕೌಟುಂಬಿಕ ಕಲಹ: ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆಗೆ ಯತ್ನ

ದೇವನಹಳ್ಳಿ | ಕೌಟುಂಬಿಕ ಕಲಹ: ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆಗೆ ಯತ್ನ

ದೇವನಹಳ್ಳಿ | ಕೌಟುಂಬಿಕ ಕಲಹ: ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆಗೆ ಯತ್ನ

ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬಳಿಯ ತಾಜ್ ಹೋಟೆಲ್‌ನಲ್ಲಿ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ, ತಂದೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಬೆಂಗಳೂರಿನ ನಾಗವಾರದ ಶೈಕ್‌ ಝಹೆರಾ (5), ಶೈಕ್‌ ಝೋಯಾ (10) ಕೊಲೆಯಾದ ಮಕ್ಕಳು. ಸೋಮವಾರ ಸಂಜೆ ಮಕ್ಕಳ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದರು.

ತಾಜ್ ಹೋಟೆಲ್‌ ಭದ್ರತಾ ವ್ಯವಸ್ಥಾಪಕರು ನೀಡಿದ ಮಾಹಿತಿ ಮೇರೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದಾಗ ಇಬ್ಬರು ಹೆಣ್ಣು ಮಕ್ಕಳ ಮೃತದೇಹ ಪತ್ತೆಯಾಗಿದೆ ಎಂದು ಮೂಲಗಳು ಹೇಳಿವೆ.

ಹೆಣ್ಣು ಮಕ್ಕಳ ತಂದೆ ಎಸ್‌.ಜಿ.ಇಮ್ರಾನ್‌ (40) ಕೃತ್ಯ ಎಸಗಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಇಮ್ರಾನ್‌ ಸಹ ಆತ್ಮಹತ್ಯೆಗೆ ಯತ್ನಿಸಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಮ್ರಾನ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರು ಚೇತರಿಸಿಕೊಂಡ ಬಳಿಕ ವಶಕ್ಕೆ ಪಡೆದು ತನಿಖೆ ನಡೆಸಲಾಗುವುದು ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದರು.

‘ಇಮ್ರಾನ್‌ ಪತ್ನಿಗೆ ಬೇರೆಯ ವ್ಯಕ್ತಿಯ ಜತೆಗೆ ಸ್ನೇಹವಿತ್ತು. ಅದೇ ವಿಚಾರಕ್ಕೆ ಮಕ್ಕಳನ್ನು ಹೋಟೆಲ್‌ಗೆ ಕರೆತಂದು ಕೃತ್ಯ ಎಸಗಿದ್ದಾರೆ ಎಂಬುದು ಕಂಡುಬಂದಿದೆ’ ಎಂದು ಅವರು ತಿಳಿಸಿದರು.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ