ಜೀ ಕನ್ನಡದಲ್ಲಿ ಹೊಸ ರಿಯಾಲಿಟಿ ಶೋ..

ಜೀ ಕನ್ನಡದಲ್ಲಿ ಹೊಸ ರಿಯಾಲಿಟಿ ಶೋ..

ಜೀ ಕನ್ನಡದಲ್ಲಿ ಹೊಸ ರಿಯಾಲಿಟಿ ಶೋ..

ಜೀ ಕನ್ನಡ ತನ್ನ ಪ್ರೇಕ್ಷಕರಿಗಾಗಿ ಹಳ್ಳಿ ಪವರ್ ರಿಲೋಡೆಡ್ ಎಂಬ ವಿನೂತನ ರಿಯಾಲಿಟಿ ಶೋವ ಅನ್ನು ಪರಿಚಯಿಸಲು ಸಜ್ಜಾಗಿದೆ. ಗ್ರಾಮೀಣ ಕರ್ನಾಟಕದ ಸಂಸ್ಕೃತಿ, ಬದುಕಿನ ಸೊಗಡು ಮತ್ತು ಸವಾಲುಗಳನ್ನು ಪರಿಚಯಿಸುವ ಈ ಕಾರ್ಯಕ್ರಮವು ಆತ್ಮವಿಶ್ವಾಸ, ಒಗ್ಗಟ್ಟು ಹಾಗೂ ಜೀವನದ ಹೊಸ ಅನುಭವಗಳನ್ನು ಅನಾವರಣಗೊಳಿಸಲಿದೆ. ಆಗಸ್ಟ್ 8ರಿಂದ ಈ ಕಾರ್ಯಕ್ರಮವು ಶನಿವಾರ ಮತ್ತು ಭಾನುವಾರ ರಾತ್ರಿ 9 ಗಂಟೆಗೆ ಹಾಗೂ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9:30 ಗಂಟೆಗೆ ಪ್ರಸಾರವಾಗಲಿದೆ.

ಈ ಸ್ಪರ್ಧಿಗಳಿಗೆ ಟೆಲಿವಿಷನ್, ಮೊಬೈಲ್, ಇಂಟರ್ನೆಟ್ ಸೇರಿದಂತೆ ಯಾವುದೇ ಐಷಾರಾಮಿ ಸೌಲಭ್ಯಗಳು ಸಿಗುವುದಿಲ್ಲ ಮತ್ತು ಹಳ್ಳಿಯ ಸರಳ ಜೀವನಕ್ಕೆ ಒಗ್ಗಬೇಕು ಹಾಗು ಕುಟುಂಬದವರಿಂದ ದೂರ ಇರಬೇಕು. ಕೃಷಿ ಕೆಲಸ, ಜಾನುವಾರುಗಳ ಆರೈಕೆ, ಅಡುಗೆ, ಮನೆಯ ಜವಾಬ್ದಾರಿಗಳು, ಹಳ್ಳಿಯ ದಿನನಿತ್ಯದ ಕಠಿಣ ಕೆಲಸಗಳು.. ಹೀಗೆ ಪ್ರತಿಯೊಂದು ಸವಾಲೂ ಸ್ಪರ್ಧಿಗಳ ದೈಹಿಕ ಸಾಮರ್ಥ್ಯ ಹಾಗೂ ಮಾನಸಿಕ ಸ್ತಿಮಿತತೆಯನ್ನು ಪರೀಕ್ಷಿಸಲಿದೆ.

ಸ್ಪರ್ಧಿಗಳ ಸಂಪೂರ್ಣ ವಿವರ

ಎಲ್ಲರ ಅಚ್ಚುಮೆಚ್ಚಿನ ಕರ್ನಾಟಕದ ಹೆಸರಾಂತ ನಿರೂಪಕ ಅಕುಲ್ ಬಾಲಾಜಿ ಅವರು ಹಳ್ಳಿ ಪವರ್ ಶೋ ನ ನಿರೂಪಣಾ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಸ್ನೇಹ ಹೆಚ್, ಬಿಬಿ ಹಾಜಿರಾ, ಏಂಜೆಲೀನ್, ರಿಗ್ಮ್ಯಾ ರಾಜಶ್ರೀ, ದರ್ಶಿನಿ ಗೌಡ, ಪೂಜಾ ಚಂದ್ರಶೇಖರ್, ಅನಿಷಾ ಲಕ್ಷ್ಮಣ್, ಸುಷ್ಮಾ ತೊಗರೆ, ತೇಜಸ್ವಿನಿ, ಅಂಕಿತ ದೇವ್, ಪೂರ್ವಿಕ ಆರ್.ಕೆ, ಚಿತ್ರಶ್ರೀ, ಪೂರ್ವ ವೈ, ರಚನಾ, ನಿಖಿತಾ ಸ್ವಾಮಿ, ನಿವೇದಿತಾ ರೈ ಹೀಗೆ ಸಿಟಿಯಲ್ಲಿ ಬೆಳೆದ ಸ್ಪರ್ಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ಹೊಸ ಬದುಕಿಗೆ ಹೊಂದಿಕೊಳ್ಳುವ ಪ್ರಯತ್ನದಲ್ಲಿ ಸ್ಪರ್ಧಿಗಳ ನಡುವಿನ ಸ್ನೇಹ, ಎದುರಾಗುವ ಸವಾಲುಗಳು, ಗೆಲುವು-ಸೋಲು, ಆತ್ಮವಿಶ್ವಾಸ ಹಾಗೂ ಅವರ ಜೀವನದಲ್ಲಿ ಆಗುವ ಬದಲಾವಣೆಗಳನ್ನು ಪ್ರೇಕ್ಷಕರು ಕಣ್ತುಂಬಿಕೊಳ್ಳಲಿದ್ದಾರೆ. 'ಹಳ್ಳಿ ಪವರ್' ಪಟ್ಟವನ್ನು ತಮ್ಮದಾಗಿಸಿಕೊಳ್ಳುವ ಗುರಿಯೊಂದಿಗೆ ಪ್ರತಿಯೊಬ್ಬ ಸ್ಪರ್ಧಿಯೂ ತಮ್ಮ ಅತ್ಯುತ್ತಮ ಪ್ರದರ್ಶನ ನೀಡಲಿದ್ದು, ಅವರ ಈ ರೋಚಕ ಪಯಣ ಮನರಂಜನೆಯ ಜೊತೆಗೆ ಪ್ರೇಕ್ಷಕರಿಗೆ ಸ್ಫೂರ್ತಿಯನ್ನೂ ಸಹ ನೀಡಲಿದೆ. ಆಗಸ್ಟ್ 8ರಿಂದ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 9 ಗಂಟೆಗೆ ಹಾಗೂ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9:30 ಗಂಟೆಗೆ ಜೀ ಕನ್ನಡದಲ್ಲಿ ಪ್ರಸಾರ ಆಗುವ 'ಹಳ್ಳಿ ಪವರ್ ರಿಲೋಡೆಡ್ ' ಕಾರ್ಯಕ್ರಮವನ್ನು ವೀಕ್ಷಣೆ ಮಾಡಬಹುದಾಗಿದೆ.

zee kannada reality show

zee kannada reality show

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ