ದೆಹಲಿ ರಾಷ್ಟ್ರಪತಿ ಭವನದಲ್ಲಿ ರಕ್ಷಾಬಂಧನ ಕಾರ್ಯಕ್ರಮಕ್ಕೆ ವಿದ್ಯಾರ್ಥಿನಿ ಆಯ್ಕೆ

ದೆಹಲಿ ರಾಷ್ಟ್ರಪತಿ ಭವನದಲ್ಲಿ ರಕ್ಷಾಬಂಧನ ಕಾರ್ಯಕ್ರಮಕ್ಕೆ ವಿದ್ಯಾರ್ಥಿನಿ ಆಯ್ಕೆ

ದೆಹಲಿ ರಾಷ್ಟ್ರಪತಿ ಭವನದಲ್ಲಿ ರಕ್ಷಾಬಂಧನ ಕಾರ್ಯಕ್ರಮಕ್ಕೆ ವಿದ್ಯಾರ್ಥಿನಿ ಆಯ್ಕೆ

ಚನ್ನಪಟ್ಟಣ: ದೆಹಲಿ ರಾಷ್ಟ್ರಪತಿ ಭವನದಲ್ಲಿ ಶುಕ್ರವಾರ (ಆ.28) ನಡೆಯಲಿರುವ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಭಾಗವಹಿಸಲು ತಾಲ್ಲೂಕಿನ ಮತ್ತೀಕೆರೆ ಸರ್ಕಾರಿ ಆದರ್ಶ ವಿದ್ಯಾಲಯದ 9ನೇ ತರಗತಿ ವಿದ್ಯಾರ್ಥಿನಿ ಆರ್.ಕುಮದ್ವಿನಿ ಆಯ್ಕೆಯಾಗಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ, ಪ್ರಧಾನಮಂತ್ರಿ ಸಮ್ಮುಖದಲ್ಲಿ ನಡೆಯಲಿರುವ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಐದು ಮಂದಿ ವಿದ್ಯಾರ್ಥಿಗಳು ರಾಜ್ಯವನ್ನು ಪ್ರತಿನಿಧಿಸುತ್ತಿದ್ದು, ಅವರ ಪೈಕಿ ಕುಮದ್ವಿನಿ ಕೂಡ ಒಬ್ಬರು. ಇವರು ತಾಲ್ಲೂಕಿನ ಹಿರಿಯ ವಕೀಲರಾದ ಬಿ.ವಿ.ಅಂಬಿಕಾ ಮತ್ತು ರಘುನಂದನ್ ದಂಪತಿ ಪುತ್ರಿ.

ಮೈಸೂರು, ಮಂಡ್ಯ, ತುಮಕೂರು, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಉತ್ತರ ಜಿಲ್ಲೆಗಳಿಂದ ತಲಾ ಒಬ್ಬರಂತೆ ಆಯ್ಕೆ ಮಾಡಲು ಜಿಲ್ಲಾ ಉಪ ನಿರ್ದೇಶಕರ ಕಚೇರಿಗೆ ತಿಳಿಸಲಾಗಿತ್ತು. ಜಿಲ್ಲೆಯಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ನೀಡಿದ್ದ ತಾಲ್ಲೂಕಿನ ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ ಈ ಅವಕಾಶ ನೀಡಲಾಗಿತ್ತು. ಅದರಂತೆ ಶಾಲೆ ಮುಖ್ಯ ಶಿಕ್ಷಕರ ನೇತೃತ್ವದಲ್ಲಿ ಶಿಕ್ಷಕರ ಸಭೆ ಕರೆದು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಅತ್ಯುತ್ತಮ ಸಾಧನೆ ತೋರಿರುವ ಪ್ರತಿಭಾವಂತ ವಿದ್ಯಾರ್ಥಿನಿ ಕುಮದ್ವಿನಿ ಅವರನ್ನು ಆಯ್ಕೆ ಮಾಡಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260828-14-824849542

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ