ಶಿಕ್ಷಣ ಸುಧಾರಣೆ: ಯು.ಟಿ.ಖಾದರ್‌ ಅಧ್ಯಕ್ಷತೆಯಲ್ಲಿ ಸಂಪುಟ ಉಪಸಮಿತಿ

ಶಿಕ್ಷಣ ಸುಧಾರಣೆ: ಯು.ಟಿ.ಖಾದರ್‌ ಅಧ್ಯಕ್ಷತೆಯಲ್ಲಿ ಸಂಪುಟ ಉಪಸಮಿತಿ

ಶಿಕ್ಷಣ ಸುಧಾರಣೆ: ಯು.ಟಿ.ಖಾದರ್‌ ಅಧ್ಯಕ್ಷತೆಯಲ್ಲಿ ಸಂಪುಟ ಉಪಸಮಿತಿ

ಬೆಂಗಳೂರು: ಶಿಕ್ಷಣ, ಪರೀಕ್ಷಾ ವ್ಯವಸ್ಥೆಯಲ್ಲಿ ಆಮೂಲಾಗ್ರ ಸುಧಾರಣೆ ತರಲು ಮುಂದಾಗಿರುವ ರಾಜ್ಯ ಸರ್ಕಾರ, ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ, ಅಧ್ಯಯನ ವರದಿ ಸಲ್ಲಿಸಲು ಆರೋಗ್ಯ ಸಚಿವ ಯು.ಟಿ. ಖಾದರ್‌ ಅಧ್ಯಕ್ಷತೆಯಲ್ಲಿ ಐವರನ್ನು ಒಳಗೊಂಡ ಸಚಿವ ಸಂಪುಟ ಉಪಸಮಿತಿ ರಚಿಸಿದೆ. 

ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ, ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಹಾಗೂ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಮಿತಿಯಲ್ಲಿದ್ದಾರೆ. 

ಶಿಕ್ಷಣ ಮೂಲಸೌಕರ್ಯ ಬಲಪಡಿಸುವುದು, ಪಠ್ಯಕ್ರಮ ಸುಧಾರಿಸುವುದು, ವಿದ್ಯಾರ್ಥಿಗಳ ಮಾನಸಿಕ ಆರೋಗ್ಯಕ್ಕೆ ಅಗತ್ಯವಾದ ಬೆಂಬಲ ವ್ಯವಸ್ಥೆ ಅಭಿವೃದ್ಧಿಪಡಿಸುವುದು, ಸಕಾಲಕ್ಕೆ ವಿದ್ಯಾರ್ಥಿವೇತನ ಒದಗಿಸುವುದು, ಪ್ರವೇಶ ಪ್ರಕ್ರಿಯೆಗಳಲ್ಲಿನ ತೊಡಕುಗಳನ್ನು ನಿವಾರಿಸುವ ಕುರಿತು ಸಮಿತಿಯು ಗಮನಹರಿಸಲಿದೆ.

ಆರಂಭದಲ್ಲೇ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು, ಶಿಕ್ಷಣ ಸಂಸ್ಥೆಗಳು ಸೇರಿದಂತೆ ಸಂಬಂಧಿತ ಎಲ್ಲ ಪಾಲುದಾರರ ಜತೆಗೆ ಸಮಾಲೋಚನೆ ನಡೆಸಿ ಒಂದು ತಿಂಗಳೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೂಚಿಸಿದ್ದಾರೆ. ಸಾರ್ವಜನಿಕ ವಿಶ್ವವಿದ್ಯಾಲಯಗಳ ಸ್ಥಿತಿಗತಿ, ಹಣಕಾಸಿನ ಪರಿಸ್ಥಿತಿ ಕುರಿತು ಅಧ್ಯಯನ ಮಾಡಲು ರಚಿಸಲಾಗಿದ್ದ ಸಂಪುಟ ಉಪಸಮಿತಿಯನ್ನು ಪುನರ್‌ರಚಿಸಲು ನಿರ್ಧರಿಸಿದ್ದಾರೆ. 

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ