ಬಿಜೆಪಿ‌ ಕಚೇರಿಯಲ್ಲಿ ಬಿ.ಸಿ.ನಾಗೇಶ್ ಅವರ ಅಂತಿಮ ದರ್ಶನ ಪಡೆದ ಡಿ.ಕೆ‌.ಶಿವಕುಮಾರ್

ಬಿಜೆಪಿ‌ ಕಚೇರಿಯಲ್ಲಿ ಬಿ.ಸಿ.ನಾಗೇಶ್ ಅವರ ಅಂತಿಮ ದರ್ಶನ ಪಡೆದ ಡಿ.ಕೆ‌.ಶಿವಕುಮಾರ್

ಬಿಜೆಪಿ‌ ಕಚೇರಿಯಲ್ಲಿ ಬಿ.ಸಿ.ನಾಗೇಶ್ ಅವರ ಅಂತಿಮ ದರ್ಶನ ಪಡೆದ ಡಿ.ಕೆ‌.ಶಿವಕುಮಾರ್

ಬೆಂಗಳೂರು: ಮಾಜಿ ಶಾಸಕ, ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರ ನಿಧನಕ್ಕೆ ಸಿಎಂ ಡಿ‌ ಕೆ ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

ಬಿಜೆಪಿ‌ ಕಚೇರಿಯಲ್ಲಿ ಬಿ.ಸಿ.ನಾಗೇಶ್ ಅವರ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿರುವ ಡಿ.ಕೆ ಶಿವಕುಮಾರ್ ಅವರು, 'ಸರಳತೆಯಿಂದ ನಾಗೇಶ್ ಅವರು ಎಲ್ಲರ ಆಪ್ತರಾಗಿದ್ದರು.‌ ನೇರ ನಡೆ- ನುಡಿಗೆ ಹೆಸರಾಗಿದ್ದರು. ಸಾರ್ವಜನಿಕ ಜೀವನದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು, ಜನರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದರು. ಶಾಸಕರಾಗಿ ಹಾಗೂ ಶಿಕ್ಷಣ ಸಚಿವರಾಗಿ ಅವರು ಸಲ್ಲಿಸಿದ ಸೇವೆ ಸ್ಮರಣೀಯ‘ ಎಂದಿದ್ದಾರೆ.

'ಶಿಕ್ಷಣ ಕ್ಷೇತ್ರದ ಸುಧಾರಣೆ ಮತ್ತು ವಿದ್ಯಾರ್ಥಿಗಳ ಹಿತದ ಬಗ್ಗೆ ಅವರು ವಿಶೇಷ ಕಾಳಜಿ ಹೊಂದಿದ್ದರು. ರಾಜಕೀಯ ಭಿನ್ನಾಭಿಪ್ರಾಯಗಳ ನಡುವೆಯೂ ಸೌಹಾರ್ದಯುತ ಸಂಬಂಧ ಕಾಪಾಡಿಕೊಂಡಿದ್ದರು'.

ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ದುಃಖತಪ್ತ ಕುಟುಂಬದ ಸದಸ್ಯರಿಗೆ, ಬಂಧುಬಳಗಕ್ಕೆ ಹಾಗೂ ಅಪಾರ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ಮತ್ತು ಧೈರ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ‘ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಮ್ಮ‌ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ