ಹೊಸಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ಪೂರ್ಣ, ಉದ್ಘಾಟನೆಗೆ ಸಿದ್ಧ

ಹೊಸಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ಪೂರ್ಣ, ಉದ್ಘಾಟನೆಗೆ ಸಿದ್ಧ

ಹೊಸಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ಪೂರ್ಣ, ಉದ್ಘಾಟನೆಗೆ ಸಿದ್ಧ

ಸೇಡಂ: ಅಡಿಗಲ್ಲು ಸಮಾರಂಭ ನಂತರ 4 ತಿಂಗಳಲ್ಲಿಯೇ ಸೇತುವೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, 5ನೇ ತಿಂಗಳಲ್ಲಿ ಉದ್ಘಾಟನೆಗೊಳ್ಳುತ್ತಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿದೆ.

ಮಾರ್ಚ್ 30ರಂದು ಸಚಿವ ಡಾ.ಶರಣಪ್ರಕಾಶ ಪಾಟೀಲ ₹80 ಲಕ್ಷ ಅನುದಾನದಡಿ ಸೇತುವೆ ನಿರ್ಮಾಣಕ್ಕೆ ಅಡಿಗಲ್ಲು ಸಮಾರಂಭ ನೆರವೇರಿಸಿದ್ದರು. ಗುಣಮಟ್ಟದ ಜೊತೆಗೆ ಶೀಘ್ರ ಪೂರ್ಣಗೊಳಿಸಲು ಸೂಚಿಸಿದ್ದರು. ಜುಲೈ ತಿಂಗಳಲ್ಲಿಯೇ ಪೂರ್ಣಗೊಂಡಿದ್ದು, ಆ.11 ರಂದು ಸಚಿವರು ಉದ್ಘಾಟಿಸಲಿದ್ದಾರೆ.

‘ನಮ್ಮೂರಿನಿಂದ ಸ್ವಲ್ಪ ದೂರದಲ್ಲಿ ನಾಲಾವಿದ್ದು, ಮಳೆಗಾಲದಲ್ಲಿ ನಾಲಾ ತುಂಬಿ ರಸ್ತೆ ಮೇಲೆ ನೀರು ಹರಿಯುತ್ತಿತ್ತು. ರಸ್ತೆಗೆ ಸೇತುವೆ ಇಲ್ಲದ ಕಾರಣ, ನೀರು ರಸ್ತೆ ಮೇಲೆ ಹರಿಯುತ್ತಿತ್ತು. ಇದರಿಂದ ಜನರು ಬೇರೆ ಕಡೆ ಹೋಗಲು ಸಾಧ್ಯವಾಗುತ್ತಿರಲಿಲ್ಲ. ಶಾಲಾ ಮಕ್ಕಳು, ರೈತರು, ವ್ಯಾಪಾರಿಗಳು, ಶಿಕ್ಷಕರು ಬೇರಿ ಊರಿಗೆ ಹೋಗಲು ಸಾಧ್ಯವಾಗುತ್ತಿರಲಿಲ್ಲ. ಯಾವುದೇ ಸಂಪರ್ಕವಿಲ್ಲದೆ ನಮ್ಮೂರು ದ್ವೀಪದಂತಾಗುತ್ತಿತ್ತು. ಈಗ ಸೇತುವೆ ನಿರ್ಮಾಣದಿಂದ ಗ್ರಾಮಸ್ಥರಿಗೆ ಅನುಕೂಲವಾಗಲಿದೆ’ ಎನ್ನುತ್ತಾರೆ ಮುಖಂಡ ಕರಬಸಪ್ಪ ಭಂಕೂರ.

‘ಈ ಮೊದಲು ನಾಲಾದ ಜಾಗದಲ್ಲಿ ಸಿಸಿ ರಸ್ತೆಯಿತ್ತು. ಸಿಸಿ ರಸ್ತೆ ಅಗಿದು ಜಿಲ್ಲಾ ಖನಿಜ ನಿಧಿಯ ಅನುದಾನದಲ್ಲಿ ₹80 ಲಕ್ಷ ವೆಚ್ಚದಲ್ಲಿ ಸೇತುವೆ ಕೆಳಗೆ ಮೂರು 3 ಮೀಟರ್ ಅಗಲ, 2 ಮೀ. ಎತ್ತರದಲ್ಲಿ ನೀರು ಸಂಚರಿಸಲು ಮೂರು ಭಾಗಗಳನ್ನು ನಿರ್ಮಿಸಲಾಗಿದೆ. ಸುಮಾರು 3 ಮೀಟರ್ ಎತ್ತರ, 13 ಮೀಟರ್ ಉದ್ದದಲ್ಲಿ ಸೇತುವೆ ನಿರ್ಮಾಣಗೊಂಡಿದೆ. ನಿಗದಿತ ಅವಧಿಗಿಂತ ಮೊದಲೇ ಪೂರ್ಣಗೊಂಡಿದೆ’ ಎಂದು ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ಎಇಇ ವಿಶ್ವನಾಥ ಮಾವಿನಗಿಡ ‘ಪ್ರಜಾವಾಣಿ’ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260811-31-1124903030

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ