ಹುಣಸೂರು: ಧ್ವನಿ ಮತ್ತು ಬೆಳಕು ಮಾಲೀಕರ ಸಂಘದ ವಾರ್ಷಿಕೋತ್ಸವ ನಾಳೆ

ಹುಣಸೂರು: ಧ್ವನಿ ಮತ್ತು ಬೆಳಕು ಮಾಲೀಕರ ಸಂಘದ ವಾರ್ಷಿಕೋತ್ಸವ ನಾಳೆ

ಹುಣಸೂರು: ಧ್ವನಿ ಮತ್ತು ಬೆಳಕು ಮಾಲೀಕರ ಸಂಘದ ವಾರ್ಷಿಕೋತ್ಸವ ನಾಳೆ

ಹುಣಸೂರು: ಧ್ವನಿ ಮತ್ತು ಬೆಳಕು ಮಾಲೀಕರ ಸಂಘದ ಪ್ರಥಮ ವಾರ್ಷಿಕೋತ್ಸವ ಆ. 8 ರಂದು ಇಲ್ಲಿ ಹಮ್ಮಿಕೊಂಡಿದ್ದು, ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಮೀರ್‌ ಮುದಾಸೀರ್‌ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ಆ. 8ಂದು ನಗರದ ಸಲೀಂ ಪ್ಯಾಲೆಸ್‌ ನಲ್ಲಿ ಬೆಳಗ್ಗೆ 10.30 ಕ್ಕೆ ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮದಲ್ಲಿ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌, ಸಾಂಬಸದಾಶಿವಸ್ವಾಮೀಜಿ, ನಟರಾಜಸ್ವಾಮೀಜಿ, ಶಾಸಕ ಜಿ.ಡಿ.ಹರೀಶ್‌ ಗೌಡ, ಮಾಜಿ ಶಾಸಕ ಎಚ್.ಪಿ.ಮಂಜುನಾಥ್‌ ಭಾಗವಹಿಸುವರು ಎಂದರು.

ಸದಸ್ಯರ ಆರೋಗ್ಯ ಮತ್ತು ಅಪಘಾತ ರಕ್ಷಣೆಗೆ 45 ಸದಸ್ಯರಿಗೆ ವಿಮಾ ರಕ್ಷೆನೀಡಲಾಗಿದೆ. ಸಂಘದ ಸದಸ್ಯರು ಅಕಾಲಿಕ ನಿಧನ ಆದರೆ ಕುಟುಂಬಕ್ಕೆ ₹ 20 ಸಾವಿರ ನೀಡಲಾಗುವುದು. 10 ನೇ ತರಗತಿಯ 6, ದ್ವಿತೀಯ ಪಿಯುಸಿಯಲ್ಲಿ 6 ವಿದ್ಯಾರ್ಥಿಗಳಿಗೆ, ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ. ವೃತ್ತಿಪರ ಶಿಕ್ಷಣದಲ್ಲಿ ವ್ಯಾಸಂಗ ಮಾಡಿದ ಸದಸ್ಯರ ಮಕ್ಕಳನ್ನು ಗೌರವಿಸಲಾಗುವುದು ಎಂದರು. ಉಪಾಧ್ಯಕ್ಷ ಕುಮಾರ್‌, ಕಾರ್ಯದರ್ಶಿ ರವಿಕುಮಾರ್‌, ಖಜಾಂಚಿ ಸೋಮು, ಸಂಘನ ಕಾರ್ಯದರ್ಶಿ ಶ್ರೀನಿವಾಸ್‌ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260807-38-1298612853

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ