ಕೂಡ್ಲಿಗಿ ತಾಲ್ಲೂಕಿನ ಈಚಲಬೊಮ್ಮನಹಳ್ಳಿಯಲ್ಲಿ ರಸ್ತೆ ಕಾಮಗಾರಿ ತಡೆಗೆ ಒತ್ತಾಯ

ಕೂಡ್ಲಿಗಿ ತಾಲ್ಲೂಕಿನ ಈಚಲಬೊಮ್ಮನಹಳ್ಳಿಯಲ್ಲಿ ರಸ್ತೆ ಕಾಮಗಾರಿ ತಡೆಗೆ ಒತ್ತಾಯ

ಕೂಡ್ಲಿಗಿ ತಾಲ್ಲೂಕಿನ ಈಚಲಬೊಮ್ಮನಹಳ್ಳಿಯಲ್ಲಿ ರಸ್ತೆ ಕಾಮಗಾರಿ ತಡೆಗೆ ಒತ್ತಾಯ

ಕೂಡ್ಲಿಗಿ: ತಾಲ್ಲೂಕಿನ ಈಚಲಬೊಮ್ಮನಹಳ್ಳಿಯಲ್ಲಿ ನಿಯಮಾನುಸಾರ ನಿರ್ಮಾಣ ಮಾಡದ ಸಿಸಿ ರಸ್ತೆ ಕಾಮಗಾರಿಯನ್ನು ತಕ್ಷಣ ತಡೆ ಹಿಡಿಯಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಗುರುವಾರ ಕೆಆರ್‌ಐಡಿಎಲ್ ಸಹಾಯಕ ಎಂಜಿನಿಯರ್‌ ಬಿ. ಪರಶುರಾಮ ಅವರಿಗೆ ಮನವಿ ಸಲ್ಲಿಸಿದರು.

ಬಡೇಲಡಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಈ ಗ್ರಾಮದಲ್ಲಿ ಕೊಟ್ಟೂರು ರಸ್ತೆಯಿಂದ ಬಸವಣ್ಣನ ದೇವಸ್ಥಾನದವರಗೆ ಸಿಸಿ ರಸ್ತೆ ಕಾಮಗಾರಿ ನಡೆಯುತ್ತಿದೆ. ಆದರೆ ನಿಗದಿತ ತಾಂತ್ರಿಕ ಮಾನದಂಡಗಳು, ನಿಯಮ ಪಾಲಿಸಲಾಗುತ್ತಿದೆಯೇ ಎಂಬ ಅನುಮಾನ ಸಾರ್ವಜನಿಕರಲ್ಲಿ ಮೂಡಿದೆ ಎಂದರು.

ಹಳೆಯ ಸಿಸಿ ರಸ್ತೆಯ ಮೇಲೆಯೇ ಹೊಸ ಕಾಮಗಾರಿ ಕೈಗೊಂಡಿರುವುದಕ್ಕೆ ತಾಂತ್ರಿಕ ಹಾಗೂ ಆಡಳಿತಾತ್ಮಕ ಕಾರಣವನ್ನು ಸ್ಪಷ್ಟಪಡಿಸಬೇಕು. ಸಾರ್ವಜನಿಕರ ತೆರಿಗೆ ಹಣದಿಂದ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಗುಣಮಟ್ಟದಿಂದ ಹಾಗೂ ಪಾರದರ್ಶಕವಾಗಿ ನಡೆಯಬೇಕು. ಕಾಮಗಾರಿಯಲ್ಲಿ ಲೋಪ ಅಥವಾ ಅಕ್ರಮ ಕಂಡುಬಂದಲ್ಲಿ ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಹೊಣೆಗಾರ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಬಾಣದ ಕೃಷ್ಣ, ಜಿಲ್ಲಾ ಉಪಾಧ್ಯಕ್ಷ ಪಾಂಡುರಂಗ ನಾಯ್ಕ್, ತಾಲ್ಲೂಕು ಅಧ್ಯಕ್ಷ ನಲ್ಲಮುತ್ತಿ ರಮೇಶ್, ಪ್ರಧಾನ ಕಾರ್ಯದರ್ಶಿ ಟಿ. ಹಾಲಸ್ವಾಮಿ ಶಿವಪುರ, ಗೌರವಾಧ್ಯಕ್ಷ ನಾರಾಯಣ ನಾಯಕ, ನಗರ ಘಟಕ ಅಧ್ಯಕ್ಷ ಎಂ. ಓಬಳೇಶ್, ಕಾರ್ಯಧ್ಯಕ್ಷ ಕೆ. ಶಿವರಾಜ್, ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260828-25-1791249571

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ