
ಹಳಿಯಾಳ ತುಳಜಾ ಭವಾನಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಆರ್.ವಿ.ದೇಶಪಾಂಡೆ
ಹಳಿಯಾಳ: ಇಲ್ಲಿನ ತುಳಜಾ ಭವಾನಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾದ ತುಳಜಾ ಭವಾನಿ ಹಾಗೂ ಪರಿವಾರ ದೇವರ ಪ್ರತಿಮೆಗೆ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಶಾಸಕ ಆರ್.ವಿ.ದೇಶಪಾಂಡೆ ಶ್ರಾವಣ ಮಾಸದ ಅಂಗವಾಗಿ ವಿಶೇಷ ಪೂಜೆ ಸಲ್ಲಿಸಿದರು.
ಬೆಳಿಗ್ಗೆ ದೇವಸ್ಥಾನದ ಆವರಣದಲ್ಲಿ ಹೋಮ-ಹವನ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.
ನಂತರ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾದ ಪರಿವಾರ ದೇವತೆಗಳ ಪ್ರತಿಮೆ ಗಣಪತಿ ಮಂಗೇಶ ಮಹಾಲಕ್ಷ್ಮಿ ರಾಧಾಕೃಷ್ಣ ನವಗ್ರಹ ದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು ಹಾಗೂ ಪ್ರಸಾದ ವಿತರಿಸಲಾಯಿತು.
ಈ ಸಂದರ್ಭದಲ್ಲಿ ದೇಶಪಾಂಡೆ ಮಾತನಾಡಿ, 'ನಾಡು ಮತ್ತು ಕ್ಷೇತ್ರದಲ್ಲಿ ಒಳ್ಳೆಯ ಮಳೆ ಬೆಳೆಯಾಗಿ ನಾಡು ಸಮೃದ್ಧವಾಗಿರಲಿ. ಎಲ್ಲರಿಗೂ ಆಯುಷ್ಯ ಆರೋಗ್ಯವನ್ನು ನೀಡಿ ದೇವರು ಚೆನ್ನಾಗಿಟ್ಟಿರಲಿ’ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದು ಹೇಳಿದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260823-20-1224257787