ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ.ಎಸ್. ಪಾಟೀಲ್ ಆಯ್ಕೆ

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ.ಎಸ್. ಪಾಟೀಲ್ ಆಯ್ಕೆ

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ.ಎಸ್. ಪಾಟೀಲ್ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಗುರುಪಾದ ಗೌಡ ಸಂಗನಗೌಡ ಪಾಟೀಲ (ಜಿ.ಎಸ್. ಪಾಟೀಲ್) ಅವರನ್ನು ಆಯ್ಕೆ ಮಾಡಲಾಯಿತು.

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರು ನೂತನ ಸಚಿವರನ್ನು ಸದನಕ್ಕೆ ಪರಿಚಯಿಸಿದ ನಂತರ ಹಂಗಾಮಿ ಸಭಾಧ್ಯಕ್ಷ ಟಿ.ಬಿ. ಜಯಚಂದ್ರ ಅವರು ನೂತನ ಸಭಾಧ್ಯಕ್ಷರ ಆಯ್ಕೆ ಪ್ರಸ್ತಾವವನ್ನು ಮಂಡಿಸುವಂತೆ ಮುಖ್ಯಮಂತ್ರಿಗೆ ಸೂಚಿಸಿದರು. ಅದರಂತೆ ಮುಖ್ಯಮಂತ್ರಿ ಗುರುಪಾದಗೌಡ ಸಂಗನಗೌಡ ಪಾಟೀಲ ಅವರನ್ನು ವಿಧಾನಸಭೆಯ ನೂತನ ಸಭಾಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಪ್ರಸ್ತಾವ ಮಂಡಿಸಿದರು. ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಅನುಮೋದಿಸಿದರು. ಈ ಪ್ರಸ್ತಾಪಕ್ಕೆ ಸದನ ಧ್ವನಿಮತದಿಂದ ಒಪ್ಪಿಗೆ ನೀಡಿತು.

ಹಂಗಾಮಿ ಸಭಾಧ್ಯಕ್ಷ ಟಿ.ಬಿ. ಜಯಚಂದ್ರ ಅವರು ಗುರುಪಾದ ಗೌಡ ಸಂಗನಗೌಡ ಪಾಟೀಲ್ ಅವರು ನೂತನ ಸಭಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.

ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ಗುರುಪಾದ ಗೌಡ ಸಂಗನಗೌಡ ಪಾಟೀಲ್ ಅವರು ಕುಳಿತಿದ್ದ ಆಸನದತ್ತ ತೆರಳಿ ಅವರನ್ನು ಕೈಹಿಡಿದು ವಿಧಾನಸಭಾಧ್ಯಕ್ಷರ ಪೀಠಕ್ಕೆ ಕರೆತಂದು ಕುಳ್ಳಿರಿಸಿದರು. ಆಗ ಇಡೀ ಸದನ ಮೇಜು ಕುಟ್ಟಿ ಹರ್ಷ ವ್ಯಕ್ತಪಡಿಸಿತು.

ಬಿಜೆಪಿ ಬಹಿಷ್ಕಾರ: ಸಾಂವಿಧಾನಿಕ ಹುದ್ದೆಯಾದ ಸಭಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಹೈಕಮಾಂಡ್ ಹೆಸರು ಅಂತಿಮಗೊಳಿಸಿ ಪಟ್ಟಿ ಕಳುಹಿಸಿರುವುದನ್ನು ವಿರೋಧಿಸಿ ಬಿಜೆಪಿಯು ಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಬಹಿಷ್ಕರಿಸಿತ್ತು. ಹೀಗಾಗಿ ನೂತನ ಸಭಾಧ್ಯಕ್ಷರ ಆಯ್ಕೆ ಸಂದರ್ಭದಲ್ಲಿ ಬಿಜೆಪಿ ಸದಸ್ಯರು ಸದನಕ್ಕೆ ಗೈರು ಹಾಜರಾಗಿದ್ದರು.

ಜಿ.ಎಸ್. ಪಾಟೀಲ್ ಆಯ್ಕೆ ಘೋಷಣೆಯಾಗುತ್ತಿದ್ದಂತೆಯೇ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸನದಕ್ಕೆ ಬಂದರು. ನಂತರ ಪ್ರತಿಪಕ್ಷ ನಾಯಕ ಹಾಗೂ ಆರ್, ಅಶೋಕ್ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಸನದಿಂದ ಕರೆತಂದು ಸಭಾಧ್ಯಕ್ಷರ ಪೀಠದಲ್ಲಿ ಕುಳ್ಳರಿಸಿ ಬಳಿಕ ನೂತನ ಸಭಾಧ್ಯಕ್ಷ ಗುರುಪಾದ ಗೌಡ ಸಂಗನಗೌಡ ಪಾಟೀಲ ರವರನ್ನು ಅಭಿನಂದಿಸಿದ ಡಿ.ಕೆ. ಶಿವಕುಮಾರ್, ಆರ್. ಅಶೋಕ ಸೇರಿದಂತೆ ಹಲವು ಸದಸ್ಯರು ಮಾತನಾಡಿದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ