ಉದ್ಯೋಗ ಖಾತ್ರಿ ಯೋಜನೆ ಅಡಿ ಮಾನವ ದಿನ ಸೃಜಿಸದ ಪಿಡಿಓಗಳ ಅಮಾನತು: ಖಂಡ್ರೆ ಸೂಚನೆ

ಉದ್ಯೋಗ ಖಾತ್ರಿ ಯೋಜನೆ ಅಡಿ ಮಾನವ ದಿನ ಸೃಜಿಸದ ಪಿಡಿಓಗಳ ಅಮಾನತು: ಖಂಡ್ರೆ ಸೂಚನೆ

ಉದ್ಯೋಗ ಖಾತ್ರಿ ಯೋಜನೆ ಅಡಿ ಮಾನವ ದಿನ ಸೃಜಿಸದ ಪಿಡಿಓಗಳ ಅಮಾನತು: ಖಂಡ್ರೆ ಸೂಚನೆ

ಬೆಂಗಳೂರು: ಜುಲೈ1ರಿಂದ ಮನ್ರೇಗಾ ಬದಲಿಗೆ ಜಾರಿಯಾಗಿರುವ ವಿಬಿಜಿ ರಾಮ್ ಜಿಯಲ್ಲಿ ಉದ್ಯೋಗ ನೀಡದೆ, ಮಾನವ ದಿನ ಸೃಜನೆ ಮಾಡದೆ ನಿರ್ಲಕ್ಷ್ಯ ತೋರಿದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ವಿಕಾಸಸೌಧದಲ್ಲಿ ಗುರುವಾರ ಇಲಾಖೆಯ ಉನ್ನತಾಧಿಕಾರಿಗಳ ಸಭೆ ನಡೆಸಿದ ಅವರು, 2025ರ ಜುಲೈ ತಿಂಗಳಲ್ಲಿ ಮನ್ರೇಗಾ ಅಡಿ ಉದ್ಯೋಗ ನೀಡಿ, ಮಾನವ ದಿನ ಸೃಜಿಸಿದ್ದ ಪಂಚಾಯ್ತಿಗಳಲ್ಲಿ ಈ ವರ್ಷ ಜುಲೈನಲ್ಲಿ ಒಬ್ಬರಿಗೂ ಉದ್ಯೋಗ ನೀಡದಿದ್ದರೆ ಅಂತಹವರಿಗೆ ನೋಟಿಸ್ ಜಾರಿ ಮಾಡಿ ಎಂದರು.

ಬೆಂಗಳೂರು ಸುತ್ತಮುತ್ತ ₹382 ಕೂಲಿಗೆ ಜನರು ಮುಂದೆ ಬರುವುದಿಲ್ಲ ಎನ್ನಬಹುದು, ಆದರೆ, ಗ್ರಾಮೀಣ ಪ್ರದೇಶದ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ (ಪಿಡಿಓ) ಗ್ರಾಮೀಣ ಅರ್ಹ ಫಲಾನುಭವಿಗಳಿಗೆ ಕೆಲಸ ನೀಡದೆ ಕರ್ತವ್ಯಲೋಪ ಎಸಗಿದ್ದಲ್ಲಿ ಕಾರಣ ಕೇಳಿ ನೋಟಿಸ್ ನೀಡಿ, ಉತ್ತರ ಪಡೆದು, ಒಂದೊಮ್ಮೆ ನಿರ್ಲಕ್ಷ್ಯ, ಉದಾಸೀನತೆ ಸಾಬೀತಾದಲ್ಲಿ ಅಮಾನತು ಮಾಡುವಂತೆ ಕಾರ್ಯದರ್ಶಿ ಮತ್ತು ಆಯುಕ್ತರಿಗೆ ಸೂಚನೆ ನೀಡಿದರು.

ವಿಬಿಜಿ ರಾಮ್ ಜಿಯಡಿ ಪ್ರತಿ ದಿನ 5 ಲಕ್ಷ ಮಾನವದಿನ ಸೃಜನೆ ಆಗುವವರೆಗೆ ಕಾರ್ಯದರ್ಶಿಗಳು, ಆಯುಕ್ತರು ಎಲ್ಲ ಜಿಲ್ಲಾ ಪಂಚಾಯತಿಗಳ ಸಿಇಓಗಳೊಂದಿಗೆ ನಿತ್ಯ ವರ್ಚುವಲ್ ಸಭೆ ನಡೆಸಿ ಪ್ರಗತಿ ಪರಿಶೀಲನೆ ಮಾಡಬೇಕು. ಅದೇ ರೀತಿ ಸಿಇಓಗಳು ಇ.ಓ, ಪಿಡಿಓಗಳೊಂದಿಗೆ ಸಭೆ ನಡೆಸಿ ಪ್ರಗತಿ ಪರಿಶೀಲಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿಗಳಾದ ಸಮೀರ್ ಶುಕ್ಲ, ಡಿ.ರಂದೀಪ್, ಆಯುಕ್ತರಾದ ದಿವ್ಯಾ ಪ್ರಭು, ಫೌಜಿಯಾ ತರನ್ನುಂ ಮತ್ತಿತರರು ಉಪಸ್ಥಿತರಿದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ