ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದ ಅಮೆರಿಕ ರಾಯಭಾರಿ: ಪಾಕ್ ಸಮನ್ಸ್

ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದ ಅಮೆರಿಕ ರಾಯಭಾರಿ: ಪಾಕ್ ಸಮನ್ಸ್

ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದ ಅಮೆರಿಕ ರಾಯಭಾರಿ: ಪಾಕ್ ಸಮನ್ಸ್

ಶ್ರೀನಗರ/ಇಸ್ಲಾಮಾಬಾದ್‌: ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು ಭಾರತದಲ್ಲಿನ ಅಮೆರಿಕ ರಾಯಭಾರಿ ಸರ್ಗಿಯೊ ಗೋರ್ ಹೇಳಿದ್ದಾರೆ. 

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಪಾಕಿಸ್ತಾನ, ಇಸ್ಲಾಮಾಬಾದ್‌ನಲ್ಲಿರುವ ಅಮೆರಿಕದ ಪ್ರಭಾರ ರಾಯಭಾರಿ ನತಾಲಿ ಬೇಕರ್ ಅವರಿಗೆ ಬುಧವಾರ ಸಮನ್ಸ್ ಜಾರಿಗೊಳಿಸಿದೆ.

ಜಮ್ಮು ಮತ್ತು ಕಾಶ್ಮೀರ ಭೇಟಿಯ ವೇಳೆ ಶ್ರೀನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಗೋರ್, ‘ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಹಾಗೂ ಮಹತ್ವದ ಭಾಗವಾಗಿದ್ದು, ಅತ್ಯಂತ ಸುಂದರವಾದ ತಾಣವಾಗಿದೆ’ ಎಂದು ಹೇಳಿಕೆ ನೀಡಿದ್ದರು.  

ಪ್ರಸಿದ್ಧ ದಾಲ್ ಲೇಕ್‌ನಲ್ಲಿ ಸಂಚರಿಸಿದ ಅವರು, ‘ಕೇಂದ್ರ ಸರ್ಕಾರ ಹಾಗೂ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕೈಗೊಂಡಿರುವ ಭದ್ರತಾ ಕ್ರಮಗಳ ಹಿನ್ನೆಲೆಯಲ್ಲಿ, ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರವಾಸ ಕೈಗೊಳ್ಳುವ ಸಂಬಂಧ ನೀಡಿರುವ ಎಚ್ಚರಿಕೆಯ ಮಾರ್ಗಸೂಚಿಗಳನ್ನು ಅಮೆರಿಕ ಮರುಪರಿಶೀಲಿಸಲಿದೆ’ ಎಂದೂ ಭರವಸೆ ನೀಡಿದ್ದರು.

ಈ ಹೇಳಿಕೆ ಹೊರಬಿದ್ದ ಕೆಲವೇ ಗಂಟೆಗಳಲ್ಲಿ, ಟ್ರಂಪ್ ಆಡಳಿತದ ದಕ್ಷಿಣ ಮತ್ತು ಮಧ್ಯ ಏಷ್ಯಾದ ವಿಶೇಷ ಪ್ರತಿನಿಧಿಯೂ ಆಗಿರುವ ಗೋರ್‌ ಅವರ ಹೇಳಿಕೆಯನ್ನು ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ತೀವ್ರವಾಗಿ ಖಂಡಿಸಿದೆ.

‘ಜಮ್ಮು ಮತ್ತು ಕಾಶ್ಮೀರವನ್ನು ಭಾರತದ ಭಾಗ ಎಂದು ಬಿಂಬಿಸಿರುವುದನ್ನು ಪಾಕಿಸ್ತಾನ ತೀವ್ರವಾಗಿ ಖಂಡಿಸುತ್ತದೆ ಹಾಗೂ ತಿರಸ್ಕರಿಸುತ್ತದೆ’ ಎಂದು ಅಲ್ಲಿನ ವಿದೇಶಾಂಗ ಸಚಿವಾಲಯ ಪ್ರಕಟಣೆಯಲ್ಲಿ ಹೇಳಿದೆ. 

‘ಜಮ್ಮು ಮತ್ತು ಕಾಶ್ಮೀರವು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (ಯುಎನ್‌ಎಸ್‌ಸಿ) ನಿರ್ಣಯಗಳು ಹಾಗೂ ಕಾಶ್ಮೀರಿ ಜನರ ಆಶಯಗಳಿಗೆ ಅನುಗುಣವಾಗಿ ಇತ್ಯರ್ಥವಾಗಬೇಕಿರುವ, ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟ ವಿವಾದಿತ ಪ್ರದೇಶವಾಗಿದೆ’ ಎಂದು ಪಾಕ್ ಪ್ರತಿಪಾದಿಸಿದೆ.

ಅಮೆರಿಕ ರಾಯಭಾರಿಯ ಈ ‘ಬೇಜವಾಬ್ದಾರಿ ಹೇಳಿಕೆ’ಯು ಕಾಶ್ಮೀರ ವಿವಾದದ ಕುರಿತ ಅಮೆರಿಕದ ದೀರ್ಘಕಾಲದ ನಿಲುವಿಗೆ ಮತ್ತು ಅಂತರರಾಷ್ಟ್ರೀಯ ಕಾನೂನಿಗೆ ವಿರುದ್ಧವಾಗಿದೆ ಎಂದು ಸಚಿವಾಲಯ ಹೇಳಿದೆ. 

ಇದೇ ವೇಳೆ, ಕಳೆದ ವರ್ಷ ಮೇ ತಿಂಗಳ ಸಂಘರ್ಷದ ಬಳಿಕ ಕಾಶ್ಮೀರ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದ ಪ್ರಸ್ತಾಪವನ್ನು ಉಲ್ಲೇಖಿಸಿದ ಪಾಕಿಸ್ತಾನ, ಸಾರ್ವಜನಿಕ ಹೇಳಿಕೆಗಳನ್ನು ನೀಡುವಾಗ ಕಾಶ್ಮೀರದ ವಿವಾದಿತ ಸ್ಥಾನಮಾನಕ್ಕೆ ಬದ್ಧವಾಗಿರುವಂತೆ ಸೂಚಿಸಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ