ಸ್ವಚ್ಛ ಬೆಂಗಳೂರು ಹೆಸರಿನಲ್ಲಿ ಕಾಂಗ್ರೆಸ್‌ನ ಹೊಸ ಲೂಟಿ: ಆರ್‌. ಅಶೋಕ

ಸ್ವಚ್ಛ ಬೆಂಗಳೂರು ಹೆಸರಿನಲ್ಲಿ ಕಾಂಗ್ರೆಸ್‌ನ ಹೊಸ ಲೂಟಿ: ಆರ್‌. ಅಶೋಕ

ಸ್ವಚ್ಛ ಬೆಂಗಳೂರು ಹೆಸರಿನಲ್ಲಿ ಕಾಂಗ್ರೆಸ್‌ನ ಹೊಸ ಲೂಟಿ: ಆರ್‌. ಅಶೋಕ

‌‘ಬೆಂಗಳೂರನ್ನು ಸ್ವಚ್ಛವಾಗಿಡುವುದಕ್ಕೆ ಯಾರ ತಕರಾರು, ವಿರೋಧವೂ ಇಲ್ಲ. ಆದರೆ ಸ್ವಚ್ಛತೆ ಹೆಸರಿನಲ್ಲಿ ಜನರ ಜೇಬಿಗೆ ಕತ್ತರಿ ಹಾಕುವುದು ಯಾವ ಸೀಮೆಯ ಆಡಳಿತ’ ಎಂದು ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಪ್ರಶ್ನಿಸಿದ್ದಾರೆ.

‘ಸ್ವಚ್ಛ ಭಾರತ ಅಭಿಯಾನಕ್ಕೆ ದೇಶದಾದ್ಯಂತ ಚಾಲನೆ ನೀಡಿದ್ದೇ ಬಿಜೆಪಿ ಸರ್ಕಾರ. ಸ್ವಚ್ಛತೆಯನ್ನು ಒಂದು ಜನಾಂದೋಲನ ಮಾಡಿದ್ದೇ ಬಿಜೆಪಿ ಸರ್ಕಾರ. ಸ್ವಚ್ಛತೆ ನಮ್ಮ ಬದ್ಧತೆ. ಆದರೆ ಕಾಂಗ್ರೆಸ್ ಸರ್ಕಾರಕ್ಕೆ ಸ್ವಚ್ಛತೆ ಕೂಡ ಹಣ ವಸೂಲಿ ಮಾಡುವ ಮತ್ತೊಂದು ದಂಧೆಯಾಗಿರುವುದು ಬೆಂಗಳೂರಿನ ಜನರ ಪಾಲಿನ ದುರಂತ’ ಎಂದು ಖಾಲಿ ನಿವೇಶನ ಸ್ವಚ್ಛತೆಗೆ ಜಿಬಿಎ ಪ್ರಕಟಿಸಿರುವ ಶುಲ್ಕದ ವಿವರವನ್ನು ಸಾಮಾಜಿಕ ಜಾಲ ತಾಣದಲ್ಲಿ ಪ್ರಕಟಿಸಿ, ಟೀಕಿಸಿದ್ದಾರೆ.

‘ಇಷ್ಟಕ್ಕೂ ಸಾರ್ವಜನಿಕರಿಂದ ಆಸ್ತಿ ತೆರಿಗೆ ಕಟ್ಟಿಸಿಕೊಳ್ಳುವುದು ಯಾವ ಪುರುಷಾರ್ಥಕ್ಕೆ ರೀಲ್ಸ್ ಮಂತ್ರಿ ಕೃಷ್ಣ ಬೈರೇಗೌಡ ಅವರೇ’ ಎಂದೂ ಪ್ರಶ್ನಿಸಿದ್ದಾರೆ.

‘ಪ್ರತಿ ವರ್ಷ ಆಸ್ತಿ ತೆರಿಗೆ ವಸೂಲಿ ಮಾಡುತ್ತೀರಿ. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಒಂದರ ಹಿಂದೆ ಒಂದರಂತೆ ಈಗಾಗಲೇ ಅನೇಕ ಹೊಸ ತೆರಿಗೆ, ಹೊಸ ಶುಲ್ಕ, ಹೊಸ ಸೆಸ್‌ಗಳ ಹೊರೆ ಹಾಕಿದ್ದೀರಿ. ಈಗ ಖಾಲಿ ನಿವೇಶನಗಳನ್ನೂ ಕಾಂಗ್ರೆಸ್ ಸರ್ಕಾರದ ‘ರೆವಿನ್ಯೂ ಜನರೇಟರ್’ ಮಾಡಿಕೊಂಡಿದ್ದೀರಾ? ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡರೇ, ಇದು ಅಭಿವೃದ್ಧಿಯೇ?’ ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260811-4-591754729

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ