
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, ಪೆನ್‌ಡ್ರೈವ್ ಪತ್ತೆ
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ವಿವಿಧ ಬ್ಯಾರಕ್‌ಗಳ ಮೇಲೆ ಜೈಲು ಸಿಬ್ಬಂದಿಯೇ ದಾಳಿ ನಡೆಸಿ ತಪಾಸಣೆ ನಡೆಸಿದಾಗ ಮತ್ತೆ ಎರಡು ಮೊಬೈಲ್ ಹಾಗೂ ಒಂದು ಪೆನ್‌ಡ್ರೈವ್ (32 ಜಿಬಿ) ಪತ್ತೆ ಆಗಿವೆ.
ಕಾರಾಗೃಹದ ಪ್ರಭಾರ ಅಧೀಕ್ಷಕ ಬಿ.ಆರ್.ಅಂದಾನಿ ಅವರ ನೇತೃತ್ವದ ತಂಡವು ಆಗಸ್ಟ್ 11ರ ಮಧ್ಯರಾತ್ರಿ ವಿವಿಧ ಬ್ಯಾರಕ್‌ಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಿದಾಗ ನಿಷೇಧಿತ ವಸ್ತುಗಳು ಪತ್ತೆಯಾಗಿವೆ. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.
ನಿಷೇಧಿತ ವಸ್ತುಗಳನ್ನು ಕಾರಾಗೃಹಕ್ಕೆ ಸಾಗಿಸಿದವರು, ಸಹಕಾರ ನೀಡಿದವರು ಹಾಗೂ ಕಾರಾಗೃಹದಲ್ಲಿ ನಿಷೇಧಿತ ಮೊಬೈಲ್ ಬಳಕೆದಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಬಿ.ಆರ್.ಅಂದಾನಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260814-4-610531941