
ಮಾಲೂರು ಮುಖ್ಯರಸ್ತೆಯಲ್ಲಿ ಚೇಂಬರ್ ನೀರು ಹರಿದು ಜನರ ಪರದಾಟ
ಮಾಲೂರು: ನಗರದ ಆದರ್ಶನಗದ ಮುಖ್ಯ ರಸ್ತೆಯಲ್ಲಿ ಚೇಂಬರ್ ತುಂಬಿ ಕೊಳಚೆ ನೀರು ರಸ್ತೆಯಲ್ಲಿ ಹರಿಯುತ್ತಿದೆ. ಪಾದಚಾರಿಗಳು ಮತ್ತು ವಾಹನ ಸವಾರರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ನಗರದಲ್ಲಿ ಅಸರ್ಮಪಕ ಒಳಚರಂಡಿ ವ್ಯವಸ್ತೆಯಿಂದ ಚೇಂಬರ್ ತುಂಬಿಕೊಳ್ಳುತ್ತಿದೆ. ನಗರದ ಕೊಳಚೆ ನೀರು ಶುದ್ಧೀಕರಣ ಘಟಕ ಕೆಟ್ಟು ವರ್ಷಗಳು ಕಳೆದಿದೆ. ಈವರೆಗೆ ಇದನ್ನು ಸರಿಪಡಿಸುವ ಗೋಜಿಗೆ ಯಾರೂ ಮುಂದಾಗಿಲ್ಲ. ಇದರಿಂದಾಗಿ ಕೊಳಚೆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು, ಇನ್ನಾದರೂ ನಗರಸಭೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ನಿವಾಸಿ ಜಯರಾಂ ಒತ್ತಾಯಿಸಿದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260823-18-1907636855