
ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ಮಾಹಿತಿ ಸಂಗ್ರಹ: ಇಲ್ಲಿದೆ ಸಹಾಯವಾಣಿ ಸಂಖ್ಯೆ..
ಬೆಂಗಳೂರು: ನೇಪಾಳ ಮತ್ತು ಟಿಬೆಟ್ ಗಡಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಭವಿಸಿರುವ ದಿಢೀರ್ ಪ್ರವಾಹದ ಹಿನ್ನೆಲೆಯಲ್ಲಿ ಅಲ್ಲಿ ಸಿಲುಕಿರುವ ರಾಜ್ಯದ ಪ್ರವಾಸಿಗರು ಹಾಗೂ ಅಲ್ಲಿ ನೆಲೆಸಿರುವ ಕನ್ನಡಿಗರ ಮಾಹಿತಿಯನ್ನು ಸಂಗ್ರಹಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ವಿಪತ್ತು ನಿರ್ವಹಣೆ ಸಚಿವಾಲಯ (ಕoದಾಯ ಇಲಾಖೆ) ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.
ಸಂಕಷ್ಟದಲ್ಲಿ ಸಿಲುಕಿರುವ ಪ್ರವಾಸಿಗರು, ಅವರ ಸಂಬಂಧಿಕರು ಹಾಗೂ ಪ್ರವಾಸ ಆಯೋಜಕರು (ಟೂರ್ ಆಪರೇಟರ್ಸ್) ತಕ್ಷಣವೇ ಗೂಗಲ್ ಫಾರ್ಮ್ (Google Form) ಮೂಲಕ ಅಗತ್ಯ ವಿವರಗಳನ್ನು ಒದಗಿಸುವಂತೆ ಮನವಿ ಮಾಡಲಾಗಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯ, ನೇಪಾಳ ಮತ್ತು ಬೀಜಿಂಗ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕ ಸಾಧಿಸಿ, ರಕ್ಷಣೆ ಮತ್ತು ಸ್ಥಳಾಂತರ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ವಿಪತ್ತು ನಿರ್ವಹಣೆ ಸಚಿವಾಲಯ ತಿಳಿಸಿದೆ.
ದೂರವಾಣಿ ಸಂಖ್ಯೆ: 080-22253707
Email: seockarnataka@gmail.com
Google Form: [https://docs.google.com/forms/d/1gnw8B8vaYknr0Y2Lkn_fpWubPnKI6a8C4Em7co1Shbk/edit]