ಸ್ವಾತಂತ್ರ್ಯ ದಿನ: ಚಾಮರಾಜನಗರದಲ್ಲಿ ಸಚಿವ ಪುಟ್ಟರಂಗಶೆಟ್ಟಿ ಧ್ವಜಾರೋಹಣ

ಸ್ವಾತಂತ್ರ್ಯ ದಿನ: ಚಾಮರಾಜನಗರದಲ್ಲಿ ಸಚಿವ ಪುಟ್ಟರಂಗಶೆಟ್ಟಿ ಧ್ವಜಾರೋಹಣ

ಸ್ವಾತಂತ್ರ್ಯ ದಿನ: ಚಾಮರಾಜನಗರದಲ್ಲಿ ಸಚಿವ ಪುಟ್ಟರಂಗಶೆಟ್ಟಿ ಧ್ವಜಾರೋಹಣ

ಚಾಮರಾಜನಗರ: ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗದಲ್ಲಿ ಶನಿವಾರ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ರೇಷ್ಮೆ ಹಾಗೂ ಪಶು ಸಂಗೋಪನಾ ಇಲಾಖೆ ಸಚಿವ ಸಿ.ಪುಟ್ಟರಂಗಶೆಟ್ಟಿ ಧ್ವಜಾರೋಹಣ ನೆರವೇರಿಸಿದರು.

ಬಳಿಕ ಗೌರವ ವಂದನೆ ಸ್ವೀಕರಿಸಿದ ಸಚಿವರು ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು.

ಪೊಲೀಸ್, ಸ್ಕೌಟ್ಸ್ ಅಂಡ್ ಗೈಡ್ಸ್, ಜಿಲ್ಲಾ ಸಶಸ್ತ್ರ ಪಡೆ, ಶಾಲಾ ಕಾಲೇಜು ವಿದ್ಯಾರ್ಥಿಗಳ ಪಥ ಸಂಚಲನ ಗಮನ ಸೆಳೆಯಿತು.

ಸಮಾರಂಭದಲ್ಲಿ ವಿದ್ಯಾರ್ಥಿಗಳು ದೇಶಭಕ್ತಿ ಬಿಂಬಿಸುವ ಗೀತೆಗಳಿಗೆ ನೃತ್ಯ ಪ್ರದರ್ಶಿಸಿದರು.

ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಮುತ್ತುರಾಜ್, ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾತಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ