ಸಂವಿಧಾನ ಬಿಕ್ಕಟ್ಟು ಸೃಷ್ಟಿಸಲು ವಿಪಕ್ಷಗಳ ಸಂಚು: ಸಿಎಂ ಡಿ.ಕೆ. ಶಿವಕುಮಾರ್

ಸಂವಿಧಾನ ಬಿಕ್ಕಟ್ಟು ಸೃಷ್ಟಿಸಲು ವಿಪಕ್ಷಗಳ ಸಂಚು: ಸಿಎಂ ಡಿ.ಕೆ. ಶಿವಕುಮಾರ್

ಸಂವಿಧಾನ ಬಿಕ್ಕಟ್ಟು ಸೃಷ್ಟಿಸಲು ವಿಪಕ್ಷಗಳ ಸಂಚು: ಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: 'ವಿಧಾನ ಪರಿಷತ್ತಿನ ನೂತನ ಸಭಾಪತಿ ಸ್ಥಾನಕ್ಕೆ ಸಲೀಂ ಅಹಮದ್‌ ಅವರನ್ನು ಅಭ್ಯರ್ಥಿಯನ್ನಾಗಿ ಮಾಡುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ' ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. 

ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಬಳಿಕ ಪ್ರಸಕ್ತ ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು ಡಿಕೆಶಿ ಪ್ರತಿಕ್ರಿಯಿಸಿದ್ದಾರೆ.  

'ವಿರೋಧ ಪಕ್ಷಗಳು ರಾಜ್ಯದಲ್ಲಿ ಸಂವಿಧಾನ ಬಿಕ್ಕಟ್ಟು ಸೃಷ್ಟಿಸಲು ಯತ್ನಿಸುತ್ತಿವೆ. ತಮ್ಮಿಂದ ಬಲವಂತವಾಗಿ ರಾಜೀನಾಮೆ ಪಡೆಯಲಾಗಿದೆ ಎಂದು ಹೊರಟ್ಟಿ ಅವರಿಂದ ದೂರು ಕೊಡಿಸುವ ಮೂಲಕ ಬಿಜೆಪಿ ನಾಯಕರು ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳಲು ಹೊರಟಿದ್ದಾರೆ. ಹಿರಿಯ ನಾಯಕರಾದ ಹೊರಟ್ಟಿ ಅವರಿಗೆ ಬಿಜೆಪಿ ಕಿರುಕುಳ ನೀಡುತ್ತಿದೆ' ಎಂದು ಆರೋಪಿಸಿದ್ದಾರೆ.

'ಈ ಸಂಬಂಧ ಯು.ಟಿ. ಖಾದರ್ ಹಾಗೂ ನಾನು ರಾಜ್ಯಪಾಲರನ್ನು ಖುದ್ದಾಗಿ ಭೇಟಿಯಾಗಿ, ಪ್ರಸ್ತುತ ವಿದ್ಯಮಾನಗಳ ಕುರಿತು ಸಂಪೂರ್ಣ ವಿವರಣೆ ನೀಡಿದ್ದೇವೆ' ಎಂದಿದ್ದಾರೆ.

ಮಹಿಳೆಯರಿಗೆ ಸ್ಥಾನ ಖಚಿತ; ಖಾತೆ ಹಂಚಿಕೆಗೆ ತರಾತುರಿಯಿಲ್ಲ

ಸಂಪುಟ ರಚನೆ ಹಾಗೂ ಖಾತೆ ಹಂಚಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ‘ಮಹಿಳಾ ಪ್ರತಿನಿಧಿಗೆ ಸಂಪುಟದಲ್ಲಿ ಸೂಕ್ತ ಸ್ಥಾನ ನೀಡಲೇಬೇಕು, ನೀಡುತ್ತೇವೆ. ಆದರೆ ಅದಕ್ಕೇನೂ ಅಷ್ಟು ತರಾತುರಿ ಇಲ್ಲ. ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಸಂಪುಟ ರಚನೆ ಎಷ್ಟು ದಿನಗಳ ಬಳಿಕ ಆಯಿತು ಎಂಬುದು ಎಲ್ಲರಿಗೂ ಗೊತ್ತಿದೆ’ ಎಂದು ತಿರುಗೇಟು ನೀಡಿದ್ದಾರೆ.

'ನಾಳೆಯೇ ಖಾತೆ ಹಂಚಿಕೆ ಮಾಡಬೇಕು ಅಂಥ ಇಲ್ಲ ನಾನೊಬ್ಬನೇ ಅಧಿವೇಶನದಲ್ಲಿ ಉತ್ತರ ಕೊಡುತ್ತೀನಿ' ಎಂದಿದ್ದಾರೆ. 

ಮಾಜಿ ಸಚಿವ ನಾಗೇಂದ್ರ ಅವರ ವಿರುದ್ಧದ ಇ.ಡಿ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಅವರು, 'ಯಾರ ಮೇಲೆ ಕೇಸ್ ಇಲ್ಲ ಈ ದೇಶದಲ್ಲಿ ಹೇಳಿ? ಡಿಕೆಶಿ ಜಾಮೀನು ತಗೊಂಡಿಲ್ವಾ ? ಕುಮಾರಸ್ವಾಮಿ ಅವರು ಜಾಮೀನಿನ ಮೇಲೆ ಇಲ್ವಾ? ನಾಗೇಂದ್ರ ಕೋರ್ಟ್‌ ಷರತ್ತು ಉಲ್ಲಂಘನೆ ವಿಚಾರ ನನಗೆ ಗೊತ್ತಿಲ್ಲ. ನಾವು ಎಲ್ಲವೂ ನೋಡಿದ್ದೇವೆ. ವಿಪಕ್ಷದವರಿಗೆ ಮಾತಾಡಲು ಒಂದು ವಿಷಯ ಬೇಕು ಅಷ್ಟೇ' ಎಂದು ಹೇಳಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ