ಚಿಂತಾಮಣಿ ಸರ್ಕಾರಿ ಪಿಯು ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳ

ಚಿಂತಾಮಣಿ ಸರ್ಕಾರಿ ಪಿಯು ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳ

ಚಿಂತಾಮಣಿ ಸರ್ಕಾರಿ ಪಿಯು ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳ

ಚಿಂತಾಮಣಿ: ಸರ್ಕಾರಿ ಪಿಯು ಕಾಲೇಜುಗಳಲ್ಲಿ ಪ್ರಸಕ್ತ ಸಾಲಿನಲ್ಲಿ ದಾಖಲಾತಿ ಏರಿಕೆಯಾಗಿದೆ. ಅದರಲ್ಲೂ ತಾಲ್ಲೂಕಿನ ಬಟ್ಲಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಳೆದ ವರ್ಷಕ್ಕಿಂತ ಮೂರುಪಟ್ಟು ಪ್ರವೇಶಾತಿ ಹೆಚ್ಚಳವಾಗಿದೆ.

ತಾಲ್ಲೂಕಿನಲ್ಲಿ ಒಟ್ಟು 7 ಸರ್ಕಾರಿ ಪಿಯು ಕಾಲೇಜುಗಳಿದ್ದು ವರ್ಷದಿಂದ ವರ್ಷಕ್ಕೆ ದಾಖಲಾತಿ ಕುಸಿಯುತ್ತಿದ್ದು, ಕೆಲವು ಕಾಲೇಜುಗಳು ಮುಚ್ಚುವ ಭೀತಿ ಎದುರಿಸುತ್ತಿದ್ದವು. ಆದರೆ, ಈ ಬಾರಿ ದಾಖಲಾತಿ ಹೆಚ್ಚಳವಾಗಿದೆ.

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ತಳಗವಾರ ಪಿಯು ಕಾಲೇಜಿನಲ್ಲಿ 13, ಮೈಲಾಂಡ್ಲಹಳ್ಳಿಯಲ್ಲಿ 18, ಕೈವಾರದಲ್ಲಿ 27, ಬಟ್ಲಹಳ್ಳಿಯಲ್ಲಿ 68, ನಗರದ ಬಾಲಕರ ಕಾಲೇಜು 111, ಬಾಲಕಿಯರ ಕಾಲೇಜಿನಲ್ಲಿ 308, ಮುರುಗಮಲ್ಲ ಪಿಯು ಕಾಲೇಜಿನಲ್ಲಿ 20 ವಿದ್ಯಾರ್ಥಿಗಳು ಪ್ರವೇಶಾತಿ ಪಡೆದಿದ್ದಾರೆ.

ಬಟ್ಲಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕಳೆದ ವರ್ಷ ಶೇ 100ರಷ್ಟು ಫಲಿತಾಂಶ ಪಡೆದಿದ್ದು, ಈ ಹಿನ್ನೆಲೆ ಅನೇಕ ಮಂದಿ ಈ ಕಾಲೇಜಿಗೆ ದಾಖಲಾತಿ ಪಡೆದಿದ್ದಾರೆ.

ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಲು ಪಿಯು ಶಿಕ್ಷಣ ಇಲಾಖೆ ಅಧಿಕಾರಿಗಳು, ಪ್ರಾಂಶುಪಾಲರು, ಉಪನ್ಯಾಸಕರು ಮನೆ ಮನೆಗೆ ತೆರಳಿ ಕಸರತ್ತು ನಡೆಸಿದ್ದರು. ಸ್ವಲ್ಪ ಮಟ್ಟಿಗೆ ಹೆಚ್ಚಳವಾಗಿದೆ. ಜೊತೆಗೆ ಉತ್ತಮ ಫಲಿತಾಂಶ ಹೆಚ್ಚಳವಾದ್ದರಿಂದ ಪ್ರವೇಶಾತಿ ಸಂಖ್ಯೆ ಏರಿಕೆಯಾಗಿದೆ ಎಂಬುದು ಶಿಕ್ಷಣ ತಜ್ಞರ ಅಭಿಪ್ರಾಯವಾಗಿದೆ.

ತಾಲ್ಲೂಕಿನಲ್ಲಿ 7 ಸರ್ಕಾರಿ ಕಾಲೇಜುಗಳಿದ್ದರೆ, 30 ಖಾಸಗಿ ಪಿಯು ಕಾಲೇಜುಗಳಿವೆ. ಬಹುತೇಕ ಎಲ್ಲಾ ಕಾಲೇಜುಗಳಲ್ಲಿ ಉತ್ತಮ ದಾಖಲಾತಿ ಇದೆ. ಕೆಲವು ಕಾಲೇಜುಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಸರ್ಕಾರಿ ಕಾಲೇಜುಗಳಲ್ಲಿ ಉತ್ತಮ ಉಪನ್ಯಾಸಕರಿದ್ದಾರೆ. ಖಾಸಗಿ ಕಾಲೇಜುಗಳ ವ್ಯಾಮೋಹ ತೊರೆದು ಪೋಷಕರು ಸರ್ಕಾರಿ ಕಾಲೇಜುಗಳತ್ತ ಮುಖಮಾಡಿ. ಉತ್ತಮ ಶಿಕ್ಷಣ ದೊರೆಯುತ್ತದೆ.

ಗುಣಮಟ್ಟದ ಶಿಕ್ಷಣ ಮುಖ್ಯ

ಆಧುನಿಕ ಮತ್ತು ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳು ಹಾಗೂ ಪೋಷಕರಲ್ಲಿ ಶಿಕ್ಷಣದ ಕುರಿತು ಜಾಗೃತಿ ಮೂಡಿದ್ದು, ಹತ್ತಿರದ ಕಾಲೇಜಿಗಿಂತ ಗುಣಮಟ್ಟದ ಶಿಕ್ಷಣ ಸಿಗುವ ಕಾಲೇಜನ್ನು ಆಯ್ಕೆಮಾಡಿಕೊಳ್ಳುತ್ತಾರೆ. ಸರ್ಕಾರಿ ಸೌಲಭ್ಯಗಳಿಗಿಂತ ಉತ್ತಮ ಗುಣಮಟ್ಟದ ಶಿಕ್ಷಣ ಮುಖ್ಯ. ಹಾಗಾಗಿ ಕಾಲೇಜು ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ತಮ್ಮ ಕಾರ್ಯವೈಖರಿ ಬದಲಿಸಿಕೊಳ್ಳಿ. ಪೋಷಕರಲ್ಲಿ ನಂಬಿಕೆ ಮತ್ತು ಬದ್ಧತೆಯಿಂದ ಕರ್ತವ್ಯ ನಿರ್ವಹಿಸಿ. ಇಲ್ಲವಾದಲ್ಲಿ ಸರ್ಕಾರಿ ಪಿಯು ಕಾಲೇಜುಗಳು ಉಳಿಯುವುದು ಕಷ್ಟವಾಗುತ್ತದೆ.

ನಾರಾಯಣರೆಡ್ಡಿ, ಶಿಕ್ಷಣ ತಜ್ಞ

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260812-16-1285529330

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ