ಹದಗೆಟ್ಟ ಸಂಶಿ– ಬಸಾಪುರ ರಸ್ತೆ

ಹದಗೆಟ್ಟ ಸಂಶಿ– ಬಸಾಪುರ ರಸ್ತೆ

ಹದಗೆಟ್ಟ ಸಂಶಿ– ಬಸಾಪುರ ರಸ್ತೆ

ಸಂಶಿ (ಗುಡಗೇರಿ): ಕುಂದಗೋಳ ತಾಲ್ಲೂಕಿನ ಸಂಶಿ– ಬಸಾಪುರ ಗ್ರಾಮಗಳನ್ನು ಸಂಪರ್ಕಿಸುವ ರಸ್ತೆ ಹಾಳಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ರೈತರು ಹಾಗೂ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆ ಅಡಿ ₹5.74 ಕೋಟಿ ವೆಚ್ಚ ಮಾಡಿ, ಈ ರಸ್ತೆ ನಿರ್ಮಿಸಲಾಗಿತ್ತು. ನಿರ್ಮಾಣವಾದ ನಾಲ್ಕೇ ವರ್ಷಗಳಲ್ಲಿ ರಸ್ತೆಯಲ್ಲಿ ಗುಂಡಿಗಳು ಬಿದ್ದಿವೆ.

2021ರಲ್ಲಿ ಆರಂಭವಾಗಿದ್ದ ಕಾಮಗಾರಿ 2022ರಲ್ಲಿ ಮುಗಿದಿತ್ತು. ಸದ್ಯ ರಸ್ತೆಯಲ್ಲಿ ಅಲ್ಲಲ್ಲಿ ಡಾಂಬರ್ ಕಿತ್ತುಹೋಗಿದೆ. ಮಳೆ ಬಂದರೆ ರಸ್ತೆ ಗುಂಡಿಯಲ್ಲಿ ನೀರು ನಿಂತು ವಾಹನ ಸಂಚಾರ ದುಸ್ತರವಾಗುತ್ತದೆ.

ಟೆಂಡರ್ ಪಡೆದ ಗುತ್ತಿಗೆದಾರನೇ ಕಾಮಗಾರಿ ಮುಗಿದ ನಂತರ ಐದು ವರ್ಷ ನಿರ್ವಹಣೆ ಮಾಡಬೇಕು ಎಂಬ ನಿಯಮ ಇದೆ. ಆದರೆ, ರಸ್ತೆ ಹಾಳಾಗಿದ್ದರೂ ಗುತ್ತಿಗೆದಾರ, ಸಂಬಂಧಿಸಿದ ಇಲಾಖೆಯವರು ನಿರ್ವಹಣೆಗೆ ಕ್ರಮ ಕೈಗೊಂಡಿಲ್ಲ ಎಂಬುದು ಸಾರ್ವಜನಿಕರ ದೂರು.

‘ಸರ್ಕಾರ ಗ್ರಾಮಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನ ಮಂಜೂರು ಮಾಡುತ್ತಿದೆ. ಆದರೆ, ಅದು ಸಮರ್ಪಕವಾಗಿ ವಿನಿಯೋಗವಾಗುತ್ತಿಲ್ಲ. ಯಾವ ನಿಯಮಗಳೂ ಪಾಲನೆ ಆಗುತ್ತಿಲ್ಲ. ಸಂಬಂಧಿಸಿದವರು ತಕ್ಷಣ ಈ ರಸ್ತೆ ದುರಸ್ತಿ ಮಾಡಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು’ ಎಂದು ರೈತ ಮುಖಂಡ ಗುರುಪಾದಪ್ಪ ಬಂಕದ ಒತ್ತಾಯಿಸಿದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ