ಸಂಶಿ: ಬಾಡಿಗೆ ಕಟ್ಟಡದಲ್ಲಿ ಐಟಿಐ ಕಾಲೇಜು

ಸಂಶಿ: ಬಾಡಿಗೆ ಕಟ್ಟಡದಲ್ಲಿ ಐಟಿಐ ಕಾಲೇಜು

ಸಂಶಿ: ಬಾಡಿಗೆ ಕಟ್ಟಡದಲ್ಲಿ ಐಟಿಐ ಕಾಲೇಜು

ಸಂಶಿ (ಗುಡಗೇರಿ): ಕುಂದಗೋಳ ತಾಲ್ಲೂಕಿನ ಸಂಶಿ ಗ್ರಾಮದಲ್ಲಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಸರ್ಕಾರಿ ಐಟಿಐ ಕಾಲೇಜು ಪ್ರಾರಂಭವಾಗಿ 12 ವರ್ಷಗಳು ಕಳೆದಿದ್ದು, ಸ್ವಂತ ಕಟ್ಟಡವಿಲ್ಲದೆ ಬಾಡಿಗೆ ಕಟ್ಟಡದಲ್ಲೇ ನಡೆಯುತ್ತಿದೆ.

ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಕೈಗಾರಿಕಾ ತರಬೇತಿ ನೀಡಿ, ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ 2014ರಲ್ಲಿ ಈ ಕಾಲೇಜು ಪ್ರಾರಂಭವಾಯಿತು. ಆದರೆ, ಕಳೆದ ಒಂದು ದಶಕಕ್ಕೂ ಹೆಚ್ಚು ಕಾಲದಿಂದ ಸರ್ಕಾರ ಬಾಡಿಗೆ ಪಾವತಿಸುತ್ತಿದೆಯೇ ಹೊರತು ಸ್ವಂತ ಕಟ್ಟಡ ನಿರ್ಮಿಸಲು ಮುಂದಾಗಿಲ್ಲ.

ಐಟಿಐ ಕಾಲೇಜುಗಳಲ್ಲಿ 120ಕ್ಕೂ ಹೆಚ್ಚು ತರಬೇತಿ ಕೋರ್ಸ್‌ಗಳು ಲಭ್ಯವಿರುತ್ತವೆ. ಆದರೆ, ಈ ಕಾಲೇಜಿನಲ್ಲಿ ಕೇವಲ ಫಿಟ್ಟರ್ ಮತ್ತು ಎಲೆಕ್ಟ್ರಿಷಿಯನ್ ‘ಒನ್ ಯೂನಿಟ್’ ತರಗತಿಗಳು ಮಾತ್ರ ನಡೆಯುತ್ತಿವೆ. ನಿಯಮಿತ ತರಬೇತಿಯಿಂದ ವಂಚಿತರಾಗುತ್ತಿರುವ ಬಡ ವಿದ್ಯಾರ್ಥಿಗಳು ಅನಿವಾರ್ಯವಾಗಿ ಹುಬ್ಬಳ್ಳಿ, ಶಿಗ್ಗಾವಿ, ಲಕ್ಷ್ಮೇಶ್ವರ ಪಟ್ಟಣಗಳಿಗೆ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ಗ್ರಾಮೀಣ ಮಕ್ಕಳ ಭವಿಷ್ಯಕ್ಕಾಗಿ, ಐಟಿಐ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಗ್ರಾಮದ ಶಿಕ್ಷಣ ಪ್ರೇಮಿ ಹಾಗೂ ನಿವೃತ್ತ ಶಿಕ್ಷಕ ಎನ್.ಎಫ್. ನದಾಫ್ ಅವರು 2021ರಲ್ಲಿ 20 ಗುಂಟೆ ನಿವೇಶನವನ್ನು ದಾನ ನೀಡಿದ್ದರು. 2018ರ ಸರ್ಕಾರದ ಸುತ್ತೋಲೆ ಪ್ರಕಾರ, ಐಟಿಐ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಕನಿಷ್ಠ 1 ಎಕರೆ 7 ಗುಂಟೆ ಜಾಗ ಲಭ್ಯವಿದ್ದರೆ ಮಾತ್ರ ಅನುಮತಿ ನೀಡಲಾಗುತ್ತದೆ. ಹೀಗಾಗಿ, ದಾನ ನೀಡಿದ 20 ಗುಂಟೆ ಜಾಗದಲ್ಲಿ ಕಟ್ಟಡ ನಿರ್ಮಾಣ ಸಾಧ್ಯವಾಗಿಲ್ಲ. ಕಾಲೇಜು ಪ್ರಾಚಾರ್ಯ ಸದಾನಂದ ಬಿ.ಸಾಲಿನ್ಸ್, ‘ಕಟ್ಟಡ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260818-24-650041926

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ