ಆದಿವಾಸಿ, ಅಲೆಮಾರಿಗಳ ಸಮುದಾಯಗಳ ಅಭಿವೃದ್ಧಿಗೆ ವಿಶೇಷ ಆಯೋಗ ರಚನೆ: ಸಿಎಂ ಡಿಕೆಶಿ
ಬೆಂಗಳೂರು: ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿಶೇಷ ಆಯೋಗ ರಚನೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ.
ಈಚೆಗೆ ನಡೆದ ವಿಶ್ವ ಆದಿವಾಸಿ ದಿನಾಚರಣೆಯಲ್ಲಿ ಭಾಗಿಯಾಗಿದ್ದ ಮುಖ್ಯಮಂತ್ರಿ ಅವರಿಗೆ ಸಮುದಾಯಗಳ ಪ್ರತಿನಿಧಿಗಳು, ವಿಶೇಷ ಆಯೋಗ ರಚಿಸಿ ಎಂದು ಮನವಿ ಸಲ್ಲಿಸಿದ್ದರು. ‘ಒಂದು ತಿಂಗಳಲ್ಲಿ ಆಯೋಗ ರಚಿಸುತ್ತೇನೆ’ ಎಂದು ಶಿವಕುಮಾರ್ ಹೇಳಿದ್ದರು. ಕಾರ್ಯಕ್ರಮ ನಡೆದ ಎರಡೇ ದಿನಗಳಲ್ಲಿ ಆಯೋಗ ರಚನೆಗೆ ಆದೇಶ ಹೊರಡಿಸಿದ್ದಾರೆ.
‘ರಾಜ್ಯದಲ್ಲಿ ವಾಸಿಸುತ್ತಿರುವ ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳು ಇಂದಿಗೂ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಹಿಂದುಳಿದಿದ್ದು, ಅನೇಕ ಸವಾಲುಗಳನ್ನು ಎದುರಿಸುತ್ತಿವೆ. ಈ ಸಮುದಾಯಗಳ ಅಭಿವೃದ್ಧಿಗೆ ಮತ್ತು ಹಕ್ಕುಗಳ ರಕ್ಷಣೆಗಾಗಿ ವಿಶೇಷ ಆಯೋಗ ರಚಿಸಲು ನಿರ್ಧರಿಸಲಾಗಿದೆ’ ಎಂದು ಆದೇಶದಲ್ಲಿ ವಿವರಿಸಿದ್ದಾರೆ.
‘ಈ ಜನರಿಗೆ ಉತ್ತಮ ಶಿಕ್ಷಣ, ಪೌಷ್ಟಿಕ ಆಹಾರ, ಗುಣಮಟ್ಟದ ಆರೋಗ್ಯಸೇವೆ, ವಸತಿ, ಕುಡಿಯುವ ನೀರು ಸೇರಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260814-51-1731558929