ಕಲಬುರಗಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಶನಿವಾರ 80ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

ಬಳಿಕ ತೆರೆದ ವಾಹನದಲ್ಲಿ ಪರೇಡ್ ತುಕಡಿ ವೀಕ್ಷಿಸಿ ಗೌರವ ವಂದನೆ ಪಡೆದರು. ನಂತರ‌ ನಡೆದ ಶಿಸ್ತುಬದ್ದ ಕವಾಯತು ಸರ್ವರನ್ನು ರೋಮಾಂಚನಗೊಳಿಸಿತು.

ಸಮಾರಂಭದಲ್ಲಿ‌ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ ಪ್ರಬುದ್ಧ ಮತ್ತು ಸಮೃದ್ಧ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ ಎಲ್ಲರೂ ಒಗ್ಗಟ್ಟಿನಿಂದ ಯುವ ಕರ್ನಾಟಕದಿಂದ ನವ ಭಾರತ ನಿರ್ಮಿಸೋಣ‌ ಎಂದು ಕರೆ ನೀಡಿದರು.

ಶಾಲಾ ಮಕ್ಕಳಿಂದ ಪ್ರದರ್ಶಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.

ಸಂಸದ‌ ರಾಧಾಕೃಷ್ಣ ದೊಡ್ಡಮನಿ, ಶಾಸಕರಾದ ಕನೀಜ್ ಫಾತಿಮಾ, ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಜಗದೇವ ಗುತ್ತೇದಾರ, ತಿಪ್ಪಣ್ಣಪ್ಪ ಕಮಕನೂರ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಅಧ್ಯಕ್ಷ ದೇವೆಂದ್ರಪ್ಪ ಮರತೂರು, ಕೆ.ಕೆ.ಆರ್.ಟಿ.ಸಿ. ಅಧ್ಯಕ್ಷ ಅರುಣಕುಮಾರ ಪಾಟೀಲ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಮೇಯರ್ ವರ್ಷಾ ರಾಜೀವ ಜಾನೆ, ಉಪ ಮೇಯರ್ ತೃಪ್ತಿ ಲಾಖೆ, ಕರ್ನಾಟಕ ಮಾಹಿತಿ ಆಯೊಗದ ಕಲಬುರಗಿ ಪೀಠದ ಆಯುಕ್ತ ವೆಂಕಟ್ ಸಿಂಗ್, ಪ್ರಾದೇಶಿಕ ಅಯುಕ್ತೆ ಜಹೀರಾ ನಸೀಮ್, ಐ.ಜಿ.ಪಿ. ಶಾಂತನು ಸಿನ್ಹಾ, ಕೆ.ಕೆ.ಆರ್.ಡಿ.ಬಿ. ಕಾರ್ಯದರ್ಶಿ ನಲಿನ್ ಅತುಲ್, ಕೆ.ಕೆ.ಆರ್.ಟಿ.ಸಿ ಎಂ.ಡಿ. ಡಾ.ಬಿ.ಸುಶೀಲಾ, ಜಿಲ್ಲಾಧಿಕಾರಿ ಇಕ್ರಂ ಶರೀಫ್, ನಗರ ಪೊಲೀಸ್ ಅಯುಕ್ತ

ಎಸ್.ಡಿ.ಶರಣಪ್ಪ,‌ ಎಸ್.ಪಿ. ಅಡ್ಡೂರು ಶ್ರೀನಿವಾಸುಲು, ಜಿಲ್ಲಾ ಪಂಚಾಯಿತಿ ಸಿ.ಇ.ಒ ರಾಹುಲ ಸಂಕನೂರ್, ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಸೇರಿದಂತೆ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ