‘ಬೆಂಗಳೂರು ನಗರ ಸಂಚಾರ ಮಿಷನ್’ ರಚನೆ: ಸಂಚಾರ ವ್ಯವಸ್ಥೆ ಸುಧಾರಣೆಗೆ ಕ್ರಮ

‘ಬೆಂಗಳೂರು ನಗರ ಸಂಚಾರ ಮಿಷನ್’ ರಚನೆ: ಸಂಚಾರ ವ್ಯವಸ್ಥೆ ಸುಧಾರಣೆಗೆ ಕ್ರಮ

‘ಬೆಂಗಳೂರು ನಗರ ಸಂಚಾರ ಮಿಷನ್’ ರಚನೆ: ಸಂಚಾರ ವ್ಯವಸ್ಥೆ ಸುಧಾರಣೆಗೆ ಕ್ರಮ

ಬೆಂಗಳೂರು: ನಗರದ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಸಮಗ್ರ, ಪರಿಣಾಮಕಾರಿ, ಸುಸ್ಥಿರ ಹಾಗೂ ತಂತ್ರಜ್ಞಾನ ಆಧಾರಿತವಾಗಿ ರೂಪಿಸುವ ಉದ್ದೇಶದಿಂದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ‘ಬೆಂಗಳೂರು ನಗರ ಸಂಚಾರ ಮಿಷನ್’ ರಚಿಸಲಾಗಿದೆ.

ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಮಿತಿಯ ಉಪಾಧ್ಯಕ್ಷರಾಗಿದ್ದಾರೆ. ಗೃಹ ಇಲಾಖೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರ, ನಗರ ಪೊಲೀಸ್, ನಗರಾಭಿವೃದ್ಧಿ, ಮೂಲಸೌಕರ್ಯ ಅಭಿವೃದ್ಧಿ, ನಗರ ಭೂಸಾರಿಗೆ ನಿರ್ದೇಶನಾಲಯ, ಸಾರಿಗೆ ಇಲಾಖೆ, ಬಿಎಂಟಿಸಿ, ಮೆಟ್ರೊ, ಜಲಮಂಡಳಿ, ಲೋಕೋಪಯೋಗಿ ಇಲಾಖೆ, ಕೆ–ರೈಡ್, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಸ್ಕಾಂ, ಕೆಪಿಟಿಸಿಎಲ್, ರಾಷ್ಟ್ರೀಯ ಹೆದ್ದಾರಿ ಸಂಸ್ಥೆಗಳು ಸೇರಿ ವಿವಿಧ ಸರ್ಕಾರಿ ಹಾಗೂ ಸಾರ್ವಜನಿಕ ಸಂಸ್ಥೆಗಳ ಹಿರಿಯ ಅಧಿಕಾರಿಗಳು ಸಮಿತಿ ಸದಸ್ಯರಾಗಿದ್ದಾರೆ.

‘ನಮ್ಮ’ ಯಾತ್ರಿ, ಉಬರ್, ರ್‍ಯಾಪಿಡೊ, ಓಲಾ ಸೇರಿ ಖಾಸಗಿ ಸಂಚಾರ ವೇದಿಕೆಗಳು, ಹೋಟೆಲ್‌ಗಳು, ಶಾಲಾ–ಕಾಲೇಜು ಸಂಘಟನೆಗಳು, ಆಟೊ–ರಿಕ್ಷಾ ಮತ್ತು ಟ್ಯಾಕ್ಸಿ ಸಂಘಟನೆಗಳು, ಉದ್ಯೋಗಿಗಳ ಸಾರಿಗೆ ಸೇವೆ, ಪಾರ್ಕಿಂಗ್ ತಂತ್ರಜ್ಞಾನ ಸಂಸ್ಥೆಗಳ ಪ್ರತಿನಿಧಿಗಳನ್ನೂ ಸಮಿತಿಗೆ ನೇಮಿಸಲಾಗಿದೆ.

ಸ್ವಿಗ್ಗಿ, ಜೊಮ್ಯಾಟೊ, ಅಮೆಜಾನ್ ಲಾಜಿಸ್ಟಿಕ್ಸ್, ಫ್ಲಿಪ್‌ಕಾರ್ಟ್ ಸೇರಿ ವಿತರಣಾ ಮತ್ತು ಲಾಜಿಸ್ಟಿಕ್ಸ್ ವಲಯದ ಪ್ರತಿನಿಧಿಗಳಿಗೂ ಸಮಿತಿಯಲ್ಲಿ ಸ್ಥಾನ ಕಲ್ಪಿಸಲಾಗಿದೆ.

ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ, ಪ್ರಯಾಣದ ಅವಧಿ, ಮೊದಲ ಹಾಗೂ ಕೊನೆಯ ಮೈಲಿ ಸಂಪರ್ಕದ ಕೊರತೆ, ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳ ನಡುವಿನ ಸಮನ್ವಯದ ಕೊರತೆ, ಪಾರ್ಕಿಂಗ್ ಸಮಸ್ಯೆ, ಸರಕು ಸಾಗಣೆ ಹಾಗೂ ರಸ್ತೆ ಸ್ಥಳದ ಮೇಲಿನ ಒತ್ತಡ ಸೇರಿ ಹಲವು ನಗರ ಸಂಚಾರ ಸವಾಲುಗಳು ಎದುರಾಗುತ್ತಿವೆ. ನಗರದ ಉತ್ಪಾದಕತೆ, ಆರ್ಥಿಕ ದಕ್ಷತೆ ಹಾಗೂ ನಾಗರಿಕರ ಜೀವನಮಟ್ಟದ ಮೇಲೂ ಪರಿಣಾಮ ಬೀರುತ್ತಿವೆ. ನಗರ ಸಂಚಾರ ವ್ಯವಸ್ಥೆಯನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಈ ಸಮಿತಿ ರಚಿಸಲಾಗಿದೆ ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.

‘ಸರ್ಕಾರಿ ಸಂಸ್ಥೆಗಳ ನಡುವಿನ ಸಮನ್ವಯ ಹೆಚ್ಚಿಸುವುದು, ಖಾಸಗಿ ಸಂಚಾರ ಮತ್ತು ಲಾಜಿಸ್ಟಿಕ್ಸ್ ಸಂಸ್ಥೆಗಳನ್ನು ಅಧಿಕೃತ ಪಾಲುದಾರರನ್ನಾಗಿ ಮಾಡುವುದು, ಸಾರ್ವಜನಿಕ ಸಾರಿಗೆ–ಖಾಸಗಿ ಸಾರಿಗೆ–ಮೊದಲ ಮತ್ತು ಕೊನೆಯ ಮೈಲಿ ಸಂಪರ್ಕ– ಪಾದಚಾರಿ ಮೂಲ ಸೌಕರ್ಯಗಳನ್ನು ಸಮಗ್ರಗೊಳಿಸುವುದು ಹಾಗೂ ದತ್ತಾಂಶ ಆಧಾರಿತ ಕ್ರಮಗಳ ಮೂಲಕ ಸಂಚಾರ ದಟ್ಟಣೆ ಕಡಿಮೆ ಮಾಡುವುದು ಸೇರಿವೆ’ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

‘ಸಮಿತಿಯ ಅಡಿಯಲ್ಲಿ ಸಂಚಾರ ನಿರ್ವಹಣೆ ಮತ್ತು ರಸ್ತೆ ಸುರಕ್ಷತೆ, ಸಾರ್ವಜನಿಕ ಸಾರಿಗೆ ಸಮನ್ವಯ, ಮೊದಲ ಮತ್ತು ಕೊನೆಯ ಮೈಲಿ ಸಂಪರ್ಕ, ಕಾರ್ಪೊರೇಟ್ ಮತ್ತು ತಂತ್ರಜ್ಞಾನ ಕ್ಲಸ್ಟರ್ ಸಂಚಾರ, ಡಿಜಿಟಲ್ ಸಂಚಾರ ಮತ್ತು ದತ್ತಾಂಶ, ನಗರ ಸರಕು ಮತ್ತು ವಿತರಣಾ ಸಂಚಾರ, ಮೂಲಸೌಕರ್ಯ ಮತ್ತು ರಸ್ತೆ ಕಾಮಗಾರಿಗಳ ಸಮನ್ವಯ ಸೇರಿದಂತೆ ಏಳು ಕಾರ್ಯಪಡೆಗಳನ್ನು ರಚಿಸಲಾಗಿದೆ.

ಸಮಿತಿಯು ಪ್ರತಿ ಮೂರು ತಿಂಗಳಿಗೊಮ್ಮೆ ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಿದ್ದು, ಕಾರ್ಯಪಡೆಗಳೊಂದಿಗೆ ಕೂಡ ಮೂರು ತಿಂಗಳಿಗೊಮ್ಮೆ ಸಭೆ ನಡೆಯಲಿದೆ. ಪ್ರಗತಿ ವರದಿಯನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಸಲ್ಲಿಸಲಾಗುವುದು. ವಾರ್ಷಿಕ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು’ ಎಂದು ಮೂಲಗಳು ತಿಳಿಸಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260809-4-2140501109

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ