
ಅಂಗವಿಕಲರ 'ಮಿಟ್ಟಿ ಕೆಫೆ' ಉದ್ಘಾಟಿಸಿದ ರಾಜ್ಯಪಾಲ ಥಾವರಚಂದ್ ಗೆಹಲೋತ್
ಬೆಂಗಳೂರು: ಅಂಗವಿಕಲರಲ್ಲಿ ಅಪಾರಪ್ರತಿಭೆ, ಆತ್ಮವಿಶ್ವಾಸ ಮತ್ತು ಸಾಮರ್ಥ್ಯ ಅಡಗಿದ್ದು, ಅವರಿಗೆ ಸಮಾನ ಅವಕಾಶ ಗಳನ್ನು ಕಲ್ಪಿಸುವುದು ಸಮಾಜದ ಜವಾಬ್ದಾರಿ ಎಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ಹೇಳಿದರು.
ನಗರದ ಎಂ.ಜಿ ಮಾಲ್‌ನಲ್ಲಿ ಅಂಗವಿಕಲರು ತೆರೆದಿರುವ ‘ಮಿಟ್ಟಿ ಕೆಫೆ’ ಉದ್ಘಾಟಿಸಿ ಮಾತನಾಡಿದ ಅವರು, ‘ಅಂಗವಿಕಲರನ್ನು ಸಮಾಜದ ಮುಖ್ಯ ವಾಹಿನಿಯೊಂದಿಗೆ ಸಂಪರ್ಕಿಸುವ ಮೂಲಕ ದೇಶದ ಅಭಿವೃದ್ಧಿಯಲ್ಲಿ ಪಾಲುದಾರರನ್ನಾಗಿ ಮಾಡುವುದು ನಮ್ಮ ಗುರಿಯಾಗಿದೆ. ಕೇಂದ್ರ ಸಚಿವನಾಗಿದ್ದ ಅವಧಿಯಲ್ಲಿ ಅಂಗವಿಕಲರ ಕಲ್ಯಾಣ ಹಾಗೂ ಹಕ್ಕುಗಳ ರಕ್ಷಣೆಗಾಗಿ ವಿವಿಧ ಯೋಜನೆ, ಸೌಲಭ್ಯ ಸೇರಿದಂತೆ ಸಶಕ್ತೀಕರಣಕ್ಕಾಗಿ ವಿವಿಧ ಕಾನೂನುಗಳನ್ನು ಜಾರಿಗೆ ತರಲಾಗಿದೆ’ ಎಂದು ತಿಳಿಸಿದರು.
ಸಹಾನುಭೂತಿಗಿಂತ ಅವಕಾಶವೇ ನಿಜವಾದ ಸಬಲೀಕರಣದ ಮಾರ್ಗ ವಾಗಿದ್ದು, ಅಂಗವಿಕಲರ ಪ್ರತಿಭೆಗೆ ಸೂಕ್ತ ವೇದಿಕೆ ದೊರೆತರೆ ಅವರು ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡಬಲ್ಲರು ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಶಾಸಕ ಅರವಿಂದ ಬೆಲ್ಲದ್, ಮಿಟ್ಟಿ ಕೆಫೆ ಸಂಸ್ಥಾಪಕಿ ಅಲಿಮಾ ಆಲಂ ಭಾಗವಹಿಸಿದ್ದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260826-4-785548028