ಮೆಟ್ರೊ ಪ್ರಯಾಣಿಕರ ಗಮನಕ್ಕೆ! ವಿಧಾನಸೌಧ ನಿಲ್ದಾಣದ ಇ, ಎಫ್ ಪ್ರವೇಶ ದ್ವಾರ ಬಂದ್

ಮೆಟ್ರೊ ಪ್ರಯಾಣಿಕರ ಗಮನಕ್ಕೆ! ವಿಧಾನಸೌಧ ನಿಲ್ದಾಣದ ಇ, ಎಫ್ ಪ್ರವೇಶ ದ್ವಾರ ಬಂದ್

ಮೆಟ್ರೊ ಪ್ರಯಾಣಿಕರ ಗಮನಕ್ಕೆ! ವಿಧಾನಸೌಧ ನಿಲ್ದಾಣದ ಇ, ಎಫ್ ಪ್ರವೇಶ ದ್ವಾರ ಬಂದ್

ಬೆಂಗಳೂರು: ಡಾ. ಬಿ.ಆರ್. ಅಂಬೇಡ್ಕರ್ ನಿಲ್ದಾಣ, ವಿಧಾನಸೌಧದ ‘ಇ’ ಮತ್ತು ‘ಎಫ್’ (ಲಿಫ್ಟ್ ಪ್ರವೇಶ ದ್ವಾರ) ಪ್ರವೇಶ ದ್ವಾರಗಳನ್ನು ಇಂದು ಬೆಳಿಗ್ಗೆ 10:17ರಿಂದ ತಾತ್ಕಾಲಿಕವಾಗಿ ಮುಚ್ಚಲಾಗಿದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್‌) ತಿಳಿಸಿದೆ.

ಸ್ಥಳೀಯ ಅಧಿಕಾರಿಗಳ ಸೂಚನೆಯಂತೆ ಕ್ರಮ ಕೈಗೊಳ್ಳಲಾಗಿದೆ. ಶೀಘ್ರದಲ್ಲೇ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ‘ಎಕ್ಸ್‌’ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದೆ.

ವಿಧಾನಸೌಧ ನಿಲ್ದಾಣದ ಉಳಿದ ಪ್ರವೇಶ ದ್ವಾರಗಳು ಪ್ರಯಾಣಿಕರ ಆಗಮನ ಮತ್ತು ನಿರ್ಗಮನಕ್ಕೆ ಸಂಪೂರ್ಣವಾಗಿ ತೆರೆದಿರಲಿವೆ. ಪ್ರಯಾಣಿಕರು ಸಹಕರಿಸಬೇಕು ಎಂದು ಮನವಿ ಮಾಡಿದೆ.

‘ವಿಧಾನ ಸೌಧಕ್ಕೆ ಬಿಜೆಪಿ ಮುತ್ತಿಗೆ’

‘ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಸೋಮವಾರ ವಿಧಾನ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ’ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಹೇಳಿದ್ದಾರೆ.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾಗೇಂದ್ರ ಅವರ ರಾಜೀನಾಮೆ ಬೇಡಿಕೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ. ಸೋಮವಾರವೂ ಕಲಾಪ ನಡೆಯಲು ಬಿಡುವುದಿಲ್ಲ. ರಾಜೀನಾಮೆ ಪಡೆದ ನಂತರವಷ್ಟೇ ಬೇರೆ ವಿಷಯಗಳ ಬಗ್ಗೆ ಚರ್ಚೆ ನಡೆಸಲಿ’ ಎಂದಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ