ದರ್ಶನ್‌ ಅಭಿನಯದ ಗಜ ಸಿನಿಮಾದಲ್ಲಿ ಖಳನಾಯಕನಾಗಿ ನಟಿಸಿದ್ದ ಪ್ರದೀಪ್ ರಾವತ್ ನಿಧನ

ದರ್ಶನ್‌ ಅಭಿನಯದ ಗಜ ಸಿನಿಮಾದಲ್ಲಿ ಖಳನಾಯಕನಾಗಿ ನಟಿಸಿದ್ದ ಪ್ರದೀಪ್ ರಾವತ್ ನಿಧನ

ದರ್ಶನ್‌ ಅಭಿನಯದ ಗಜ ಸಿನಿಮಾದಲ್ಲಿ ಖಳನಾಯಕನಾಗಿ ನಟಿಸಿದ್ದ ಪ್ರದೀಪ್ ರಾವತ್ ನಿಧನ

Pradeep Ram Singh Rawat Passes Away: ಕನ್ನಡದಲ್ಲಿ ನಟ ದರ್ಶನ್‌ ಅಭಿನಯದ ಗಜ ಸಿನಿಮಾನದಲ್ಲಿ ಖಳನಾಯಕನಾಗಿ ಮಿಂಚಿದ್ದ ಪ್ರದೀಪ್ ರಾವತ್‌ (74) ಅವರು ಮಂಗಳವಾರ (ಆಗಸ್ಟ್‌ 4) ನಿಧನರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಪ್ರದೀಪ್ ರಾವತ್‌ ಅವರು ಕನ್ನಡದ ಗಜ, ತಮಿಳಿನ ಗಜಿನಿ, ತೆಲುಗಿನ ಸೈ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅದ್ಭುತ ಅಭಿನಯದ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು. ಅದರಲ್ಲೂ ಕನ್ನಡದಲ್ಲಿ ದರ್ಶನ್‌ ಅಭಿನಯಿಸಿರುವ ಗಜ ಸಿನಿಮಾದಲ್ಲಿ ಖಳನಾಯಕನಾಗಿ ಖಡಕ್‌ ಲುಕ್‌ನಲ್ಲಿ ಕಾಣಿಸಿಕೊಂಡು ಕನ್ನಡಿಗರ ಮನ ಗೆದ್ದಿದ್ದರು.

ಚಿಕಿತ್ಸೆ ಫಲಕಾರಿಯಾಗದೇ ನಿಧನ

ಇವರು ಕಳೆದ ಹಲವು ತಿಂಗಳುಗಳಿಂದ ಕ್ಯಾನ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದು, ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಈ ಮಾಹಿತಿಯನ್ನು ಸಹನಟ ಯಶ್‌ಪಾಲ್‌ ಶರ್ಮಾ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಚಿತ್ರರಂಗದ ಕಲಾವಿದರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಭಾವುಕ ಸಂದೇಶ ಹಂಚಿಕೊಂಡಿರುವ ಯಶ್‌ಪಾಲ್ ಶರ್ಮಾ ಅವರು 'ನಮ್ಮ ಗಜಿನಿ, ಲಾಗಾನ್ ಚಿತ್ರದ ದೇವಾ ಪ್ರದೀಪ್ ರಾವತ್ ಇನ್ನು ನಮ್ಮೊಂದಿಗಿಲ್ಲ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಬರೆದು ಸಂತಾಪ ಸೂಚಿಸಿದ್ದಾರೆ. ವರದಿಗಳ ಪ್ರಕಾರ ಪ್ರದೀಪ್ ರಾವತ್ ಅವರು ದೀರ್ಘಕಾಲದಿಂದ ಕ್ಯಾನ್ಸರ್‌ ಚಿಕಿತ್ಸೆ ಪಡೆಯುತ್ತಿದ್ದರು. ಆರಂಭದಲ್ಲಿ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದ ಅವರು, ಬಳಿಕ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರ ಆಗಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ