ಬಾಗೇಪಲ್ಲಿ: ಪಟ್ಟಣದಲ್ಲಿ ಸಂಚಾರ ನಿಯಮ ಉಲ್ಲಂಘನೆಗಿಲ್ಲ ಕ್ರಮ, ಸಾರ್ವಜನಿಕರ ದೂರು

ಬಾಗೇಪಲ್ಲಿ: ಪಟ್ಟಣದಲ್ಲಿ ಸಂಚಾರ ನಿಯಮ ಉಲ್ಲಂಘನೆಗಿಲ್ಲ ಕ್ರಮ, ಸಾರ್ವಜನಿಕರ ದೂರು

ಬಾಗೇಪಲ್ಲಿ: ಪಟ್ಟಣದಲ್ಲಿ ಸಂಚಾರ ನಿಯಮ ಉಲ್ಲಂಘನೆಗಿಲ್ಲ ಕ್ರಮ, ಸಾರ್ವಜನಿಕರ ದೂರು

ಬಾಗೇಪಲ್ಲಿ: ಪಟ್ಟಣದಲ್ಲಿ ದಾಖಲೆಗಳಿಲ್ಲದ ಆಟೊಗಳ ಸಂಚಾರ ಹೆಚ್ಚಾಗಿದೆ. ಸಂಚಾರ ನಿಯಮಗಳ ಉಲ್ಲಂಘನೆ ಹೆಚ್ಚುತ್ತಿದ್ದರೂ ಸಂಬಂಧಪಟ್ಟ ಪ್ರಾದೇಶಿಕ ಸಾರಿಗೆ (ಆರ್‌ಟಿಒ) ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

ನೆರೆಯ ಆಂಧ್ರಪ್ರದೇಶದ ಸಂಚಾರಕ್ಕೆ ಯೋಗ್ಯವಲ್ಲದ ಆಟೊಗಳು ಇಲ್ಲಿ ಸಂಚರಿಸುತ್ತಿವೆ. ಕೆಲ ಆಟೊ ಚಾಲಕರು ಅಸುರಕ್ಷಿತವಾಗಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನು ಸಾಗಿಸುತ್ತಿದ್ದಾರೆ. ಚಾಲನಾ ಪರವಾನಗಿ, ವಿಮೆ, ಎಫ್‍ಸಿ ಸೇರಿದಂತೆ ಸೂಕ್ತ ದಾಖಲೆ ಇರುವುದಿಲ್ಲ. ಡಿಜಿಟಲ್ ಮೀಟರ್ ಅಳವಡಿಸುವಂತೆ ಆದೇಶವಿದ್ದರೂ ಅಳವಡಿಸಿಲ್ಲ. ಸಂಚಾರ ನಿಯಮಗಳು ಸ್ಪಷ್ಟ ಉಲ್ಲಂಘನೆಯಾಗುತ್ತಿದ್ದರೂ ಅಧಿಕಾರಿಗಳು ಮೌನ ವಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಪಟ್ಟಣದ ಡಿವಿಜಿ ಮುಖ್ಯರಸ್ತೆ, ಬಸ್ ನಿಲ್ದಾಣಗಳಲ್ಲಿ ಅಡ್ಡಾದಿಡ್ಡಿಯಾಗಿ ಆಟೊಗಳನ್ನು ನಿಲ್ಲಿಸುತ್ತಿದ್ದಾರೆ. ಇದರಿಂದ ಸಂಚಾರ ದಟ್ಟಣೆಯಾಗುತ್ತಿದೆ. ಒಂದರ ಪಕ್ಕದಲ್ಲಿ ಒಂದರಂತೆ ಆಟೊಗಳನ್ನು ನಿಲ್ಲಿಸುತ್ತಿರುವುದರಿಂದ ಪಾದಚಾರಿಗಳ ಸಂಚಾರಕ್ಕೆ ತೊಡಕಾಗಿದೆ. ಪಾರ್ಕಿಂಗ್ ಜಾಗ ಮತ್ತು ರಸ್ತೆ ಬದಿ ಆಟೊಗಳನ್ನು ನಿಲ್ಲಿಸುತ್ತಿಲ್ಲ. ರಸ್ತೆಗಳಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುವುದು, ಇಳಿಸುವುದರಿಂದ ಪಾದಚಾರಿಗಳಿಗೆ ತೊಂದರೆಯಾಗುತ್ತಿದೆ.

ಸರಕು ಸಾಗಾಣೆ ಆಟೊಗಳಲ್ಲಿ ಪ್ರಯಾಣಿಕರನ್ನು ಸಾಗಿಸಲಾಗುತ್ತಿದೆ. ತಾಲ್ಲೂಕಿನ ಪರಗೋಡು, ಗೂಳೂರು, ಯಲ್ಲಂಪಲ್ಲಿ, ಪಾತಪಾಳ್ಯ ಸೇರಿದಂತೆ ವಿವಿಧ ಕಡೆಗಳಿಗೆ ಬಸ್‍ಗಳ ಕೊರತೆಗಳ ಇದೆ. ಈ ಭಾಗದ ಜನರು ಹೆಚ್ಚಾಗಿ ಆಟೊಗಳನ್ನು ಅವಲಂಬಿಸಿದ್ದಾರೆ. ಆದರೆ ಆಟೊ ಚಾಲಕರು ಹೆಚ್ಚು ಜನರನ್ನು ತುಂಬಿಕೊಂಡು ಸಂಚಾರ ಮಾಡುತ್ತಿದ್ದರೂ, ಸಂಬಂಧಪಟ್ಟ ಆರ್‌ಟಿಒ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ ಎಂದು ಪಟ್ಟಣ ನಿವಾಸಿಗಳು ದೂರಿದ್ದಾರೆ.

‘ಸಂಚಾರಕ್ಕೆ ಯೋಗ್ಯವಲ್ಲದ ಹಳೆ ಆಟೊಗಳು ಸಂಚರಿಸುತ್ತಿದ್ದರೂ ಆರ್‌ಟಿಒ ಅಧಿಕಾರಿಗಳು ಕಡಿವಾಣ ಹಾಕಿಲ್ಲ. ಹೆಚ್ಚು ಜನರನ್ನು ಸಾಗಿಸುತ್ತಾರೆ. ಪಾದಚಾರಿ ಮಾರ್ಗದಲ್ಲಿ ವ್ಯಾಪಾರ ಮಾಡುತ್ತಿರುವವರಿಗೆ ಅಧಿಕಾರಿಗಳು ದಂಡ ಹಾಕಿ, ವಾಹನಗಳನ್ನು ವಶಕ್ಕೆ ಪಡೆಯಬೇಕು’ ಎಂದು ವಕೀಲ ಬಿ.ಎ. ನರಸಿಂಹಮೂರ್ತಿ ಒತ್ತಾಯಿಸಿದರು.

‘ಪಟ್ಟಣದ ದಾಖಲೆ ಇಲ್ಲದ ಆಟೊಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಬೇಕು’ ಎಂದು ದಲಿತ ಸಂಘರ್ಷ ಸಮಿತಿ ಮುಖಂಡ ನರಸಿಂಹಯ್ಯ ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260831-16-1394843338

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ