
ಕೆಪಿಎಸ್‌ಸಿ ನೇಮಕಾತಿ ಅಕ್ರಮ: ಕಲಬುರಗಿಯ ವಿವಿಧೆಡೆ ಇ.ಡಿ ಅಧಿಕಾರಿಗಳ ದಾಳಿ
ಕಲಬುರಗಿ: ಕೆಪಿಎಸ್‌ಸಿ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕಲಬುರಗಿಯ ವಿವಿಧೆಡೆ ಜಾರಿ ನಿರ್ದೇನಾಲಯದ(ಇ.ಡಿ) ಅಧಿಕಾರಿಗಳ ತಂಡಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸುತ್ತಿವೆ.
ಇಲ್ಲಿನ ಆನಂದ ಹೋಟೆಲ್ ಸಮೀಪ ಇರುವ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅವರ ಸೂಗುರೇಶ್ವರ ಹೆಸರಿನ ಭವ್ಯ ಬಂಗಲೆ, ಓಝಾ ಕಾಲೊನಿಯಲ್ಲಿರುವ ಯಾದಗಿರಿ ಜಿಲ್ಲೆಯ ಶಹಾಪುರದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ ಕೋಬಾಳಕರ ಮನೆ ಮೇಲೆ ಏಕಕಾಲಕ್ಕೆ ಇ.ಡಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ದಾಖಲೆಗಳನ್ನು ಪರಿಶೀಲನೆಯಲ್ಲಿ ತೊಡಗಿದೆ.
ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ ಕೇಂದ್ರೀಯ ಭದ್ರತಾ ಪಡೆಯ ಬಿಗಿ ಭದ್ರತೆಯಲ್ಲಿ ಇ.ಡಿ ಅಧಿಕಾರಿ ದಾಳಿ ನಡೆಸಿದ್ದಾರೆ.
ಶಿವಶಂಕರಪ್ಪ ನಿವಾಸದ ಮೇಲೆ 10ಕ್ಕೂ ಹೆಚ್ಚು ಇ.ಡಿ ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ. ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ಆರೋಪ ಕೇಳಿ ಬಂದಿತ್ತು.