ಚಿಕ್ಕಮಗಳೂರು: ಎಡದಾಳ್ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಮಯ

ಚಿಕ್ಕಮಗಳೂರು: ಎಡದಾಳ್ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಮಯ

ಚಿಕ್ಕಮಗಳೂರು: ಎಡದಾಳ್ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಮಯ

ಸಿಂಸೆ (ನರಸಿಂಹರಾಜಪುರ): ನಾಗಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಡದಾಳ್ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯುದ್ದಕ್ಕೂ ಗುಂಡಿಗಳು ಬಿದ್ದಿದ್ದು, ಮಳೆಗಾಲದಲ್ಲಿ ಅವುಗಳಲ್ಲಿ ಕೆಸರು ನೀರು ತುಂಬಿ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ನಾಗಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿಂಸೆ ಗ್ರಾಮದ ಮೂಲಕ ಹಾದುಹೋಗುವ ಮುಖ್ಯ ರಸ್ತೆಗೆ ಹೊಂದಿಕೊಂಡಂತೆ ಎಡದಾಳ್ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇದೆ. ಗ್ರಾಮದಲ್ಲಿ 300ಕ್ಕೂ ಹೆಚ್ಚು ಮನೆಗಳಿವೆ. ಗ್ರಾಮದ ವ್ಯಾಪ್ತಿಯಲ್ಲಿ ಸುಮಾರು 2.50 ಕಿ.ಮೀ. ಉದ್ದದ ರಸ್ತೆ ಇದ್ದು, ಆರಂಭದಿಂದ ಕೊನೆಯವರೆಗೂ ಗುಂಡಿಮಯವಾಗಿದೆ.

ಬಹಳ ವರ್ಷಗಳ ಹಿಂದೆ ಈ ರಸ್ತೆಗೆ ಡಾಂಬರೀಕರಣ ಮಾಡಲಾಗಿತ್ತು. ಸದ್ಯ ಡಾಂಬರು ಕಿತ್ತುಹೋಗಿ ರಸ್ತೆ ಶಿಥಿಲಗೊಂಡಿದೆ. ಪ್ರತಿದಿನ ನೂರಾರು ವಾಹನಗಳು, ವಿದ್ಯಾರ್ಥಿಗಳು ಹಾಗೂ ಕೂಲಿ ಕಾರ್ಮಿಕರು ಇದೇ ರಸ್ತೆಯ ಮೂಲಕ ಸಂಚರಿಸಬೇಕಾಗಿದೆ. ರಾತ್ರಿ ವೇಳೆ ರಸ್ತೆ ಯಾವುದು, ಗುಂಡಿ ಯಾವುದು ಎಂದು ತಿಳಿಯದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ರಸ್ತೆ ದುರಸ್ತಿಪಡಿಸುವಂತೆ ಕೆಲವು ತಿಂಗಳ ಹಿಂದೆ ಗ್ರಾಮಸ್ಥರು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ರಸ್ತೆಗೆ ಗ್ರಾವೆಲ್ ಮಣ್ಣು ಹಾಕಿ ತಾತ್ಕಾಲಿಕವಾಗಿ ದುರಸ್ತಿ ಮಾಡಲಾಗಿತ್ತು. ಆದರೆ ಸದ್ಯ ರಸ್ತೆ ಮತ್ತೆ ಗುಂಡಿಮಯವಾಗಿ ಕೆಸರು ತುಂಬಿಕೊಂಡಿದೆ ಎಂದು ಗ್ರಾಮಸ್ಥರಾದ ಸಜಿ, ದಿನೇಶ್ ಹಾಗೂ ಕಮಲ್ ಬಾಬು ತಿಳಿಸಿದ್ದಾರೆ.

₹20 ಲಕ್ಷ ಅನುದಾನ: ಗ್ರಾಮದ ರಸ್ತೆ ಅಭಿವೃದ್ಧಿಗೆ ₹20 ಲಕ್ಷ ಅನುದಾನ ಬಿಡುಗಡೆಯಾಗಿದೆ ಎಂದು ಜನಪ್ರತಿನಿಧಿಗಳು ತಿಳಿಸಿದ್ದರು. ಆದರೆ, ಆ ಅನುದಾನವನ್ನು ಬೇರೆ ರಸ್ತೆಯ ಅಭಿವೃದ್ಧಿಗೆ ಬಳಸಲಾಗಿದೆ ಎಂದುಗ್ರಾಮಸ್ಥ ಸಜಿ ಆರೋಪಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಎಇಇ ಸಾಗರ್ ಅವರನ್ನು ಸಂಪರ್ಕಿಸಿದಾಗ, ಕೆಲವು ಗ್ರಾಮಗಳ ರಸ್ತೆ ಕಾಮಗಾರಿಗಳನ್ನು ಲೋಕೋಪಯೋಗಿ ಇಲಾಖೆಗೆ ವಹಿಸಲಾಗಿದೆ ಎಂದು ತಿಳಿಸಿದರು.

ಎಡದಾಳ್ ಗ್ರಾಮದ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಪತ್ರ ಬರೆಯಲಾಗಿತ್ತು. ಗ್ರಾಮ ಪಂಚಾಯಿತಿಯ ಅನುದಾನದಲ್ಲಿ ಮಣ್ಣು ಹಾಕಿ ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿ ಮಾಡಲಾಗಿತ್ತು ಎಂದು ನಾಗಲಾಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರೇಮಕುಮಾರ್ ತಿಳಿಸಿದರು.

ಲೋಕೋಪಯೋಗಿ ಇಲಾಖೆಯ ಕೊಪ್ಪ ವಿಭಾಗದ ಎಇಇ ಸತೀಶ್, ಕ್ಷೇತ್ರದ ವ್ಯಾಪ್ತಿಯಲ್ಲಿ ₹6 ಕೋಟಿ ಅನುದಾನದ ಗ್ರಾಮೀಣ ರಸ್ತೆ ಕಾಮಗಾರಿಗಳನ್ನು ಪಿಆರ್‌ಎಎಂಸಿ ಮೂಲಕ ಕೈಗೊಳ್ಳಲು ವಹಿಸಲಾಗಿದೆ. ಇದರಲ್ಲಿ ಎಡದಾಳ್ ಗ್ರಾಮದ ರಸ್ತೆ ಕಾಮಗಾರಿಯೂ ಸೇರಿದೆ. ₹20 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಟೆಂಡರ್ ಪ್ರಕ್ರಿಯೆ ಹಂತದಲ್ಲಿದೆ ಎಂದು ಮಾಹಿತಿ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260821-126-2016002346

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ