
ನೇಪಾಳ ಪ್ರವಾಹದಲ್ಲಿ ನಾಪತ್ತೆಯಾದ ಗದಗ ಜನರ ಮಾಹಿತಿ ನೀಡಲು ಮನವಿ
ಗದಗ: ನೇಪಾಳದಲ್ಲಿ ಸಂಭವಿಸಿದ ಪ್ರವಾಹದಲ್ಲಿ ಗದಗ ಜಿಲ್ಲೆ ಮೂಲದ ಪ್ರವಾಸಿಗರು, ನಾಗರಿಕರು ನಾಪತ್ತೆಯಾಗಿದ್ದರೆ ಅಥವಾ ಸಂಪರ್ಕಕ್ಕೆ ಸಿಗದಿದ್ದರೆ, ತಕ್ಷಣವೇ ಅವರ ವಿವರ ಒದಗಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಕುಟುಂಬಸ್ಥರು, ಸ್ನೇಹಿತರು ಅಥವಾ ಪರಿಚಿತರು ನೇಪಾಳದಲ್ಲಿದ್ದು, ಸಂಪರ್ಕಕ್ಕೆ ಸಿಗದಿದ್ದಲ್ಲಿ ಅವರ ಪೂರ್ಣ ಹೆಸರು, ಮೊಬೈಲ್ ಫೋನ್ ಸಂಖ್ಯೆ, ಕೊನೆಯದಾಗಿ ಸಂಪರ್ಕಿಸಿದ ಸ್ಥಳ ಮತ್ತು ಸಮಯ ಹಾಗೂ ಕಾಯಂ ವಿಳಾಸದ ವಿವರ ನೀಡಬೇಕು. ಇದಕ್ಕಾಗಿ ಗೂಗಲ್ ಫಾರ್ಮ್ ಲಿಂಕ್: https://docs.google.com/forms/d/1gnw8B8vaYknr0Y2Lkn_fpWubPnKI6a8C4Em7co1Shbk/viewform?edit_requested=true ನೀಡಲಾಗಿದೆ.
ಸಂತ್ರಸ್ತರು ಮತ್ತು ಅವರ ಕುಟುಂಬಸ್ಥರ ನೆರವಿಗಾಗಿ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ 24x7 ಸಹಾಯವಾಣಿ ತೆರೆದಿದ್ದು, 1070, 080-22253707, ಜಿಲ್ಲಾಧಿಕಾರಿ ಕಾರ್ಯಾಲಯದ ದೂರವಾಣಿ ಸಂಖ್ಯೆ: 08372-239177 (1077) ಕರೆ ಮಾಡಬಹುದು. ಇಮೇಲ್ ವಿಳಾಸ seockarnataka@gmail.com ಮೂಲಕವೂ ಮಾಹಿತಿ ನೀಡಬಹುದು.
ನೇಪಾಳದಲ್ಲಿ ಸಿಲುಕಿರುವ ಭಾರತೀಯರಿಗೆ ತುರ್ತು ನೆರವು ನೀಡಲು ಅಲ್ಲಿನ ಭಾರತೀಯ ರಾಯಭಾರ ಕಚೇರಿಯು ತುರ್ತು ವಾಟ್ಸ್‌ಆ್ಯಪ್ ಹಾಗೂ ಸಂಪರ್ಕ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. +977 9851316807, +977 9709107500, +977 9810326117 ಕರೆ ಅಥವಾ ವಾಟ್ಸ್ ಆ್ಯಪ್ ಮೂಲಕ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260829-23-297695069