
ವಿಧಾನಸೌಧಕ್ಕೆ ಮುತ್ತಿಗೆ: ಆರ್.ಅಶೋಕ, ಬಿ.ವೈ.ವಿಜಯೇಂದ್ರ ಪೊಲೀಸರ ವಶಕ್ಕೆ
ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧಕ್ಕೆ ನುಗ್ಗಲು ಯತ್ನಿಸಿದ ಬಿಜೆಪಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ..ವೈ.ವಿಜಯೇಂದ್ರ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.
ಲೋಕಾಯುಕ್ತ ಕಚೇರಿ ಕಡೆಯಿಂದ ವಿಧಾನಸೌಧಕ್ಕೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನುಗ್ಗಲು ಯತ್ನಿಸಿದರು. ಆಗ ಗೇಟ್ ಬಳಿಯೇ ತಡೆದು ವಶಕ್ಕೆ ಪಡೆಯಲಾಗಿದೆ.