ವಿಧಾನಸಭೆ ಅಧಿವೇಶನ: ಹಂಗಾಮಿ ಸಭಾಧ್ಯಕ್ಷರಾಗಿ ಟಿ.ಬಿ.ಜಯಚಂದ್ರ

ವಿಧಾನಸಭೆ ಅಧಿವೇಶನ: ಹಂಗಾಮಿ ಸಭಾಧ್ಯಕ್ಷರಾಗಿ ಟಿ.ಬಿ.ಜಯಚಂದ್ರ

ವಿಧಾನಸಭೆ ಅಧಿವೇಶನ: ಹಂಗಾಮಿ ಸಭಾಧ್ಯಕ್ಷರಾಗಿ ಟಿ.ಬಿ.ಜಯಚಂದ್ರ

ಬೆಂಗಳೂರು: ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಅವರು ಸೋಮವಾರದಿಂದ (ಆ.10) ಹಂಗಾಮಿ ವಿಧಾನಸಭಾ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಆಗಸ್ಟ್ 13ರಿಂದ 27ರವರೆಗೆ 10 ದಿನಗಳ ಮಳೆಗಾಲದ ವಿಧಾನ ಸಭೆ ಅಧಿವೇಶನವನ್ನು ಅವರು ನಡೆಸಿಕೊಡಲಿದ್ದು, ಸೋಮವಾರ ವಿಧಾನಸಭಾ ಅಧ್ಯಕ್ಷರ ಕಚೇರಿಗೆ ತೆರಳಿ ಕಾರ್ಯ ಆರಂಭಿಸಲಿದ್ದಾರೆ.

ಅಧಿವೇಶನದ ಮೊದಲ ದಿನವಾದ ಗುರುವಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಡಿ. ಸುಧಾಕರ್ ಹಾಗೂ ಮಾಜಿ ಪ್ರಧಾನಿ ದೇವೇಗೌಡ ಅವರ ಪತ್ನಿ ಚನ್ನಮ್ಮ ಸೇರಿದಂತೆ ಇತ್ತೀಚಿಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಗುವುದು. ಶುಕ್ರವಾರದಿಂದ ನಿಗದಿತ ವೇಳಾಪಟ್ಟಿಯಂತೆ ಕಲಾಪ ನಡೆಯಲಿದೆ.

ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದ ಸಂದರ್ಭದಲ್ಲಿ ಅವರೊಂದಿಗೆ ಜಿ.ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿಯಾಗಿ ಹಾಗೂ 12 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅವರುಗಳಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.

ಆದರೆ ಕಳೆದ ಸೋಮವಾರ ನಡೆದ ಮೊದಲ ಸಂಪುಟ ವಿಸ್ತರಣೆಯಲ್ಲಿ ಸಚಿವರಾದ 19 ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಬೇಕಿದ್ದು, ಅಧಿವೇಶನ ಆರಂಭಕ್ಕೆ ಮುನ್ನ ಸಚಿವರುಗಳಿಗೆ ಖಾತೆಗಳನ್ನು ಹಂಚುವ ಸಾಧ್ಯತೆಯಿದರ.

ಪ್ರಶ್ನೋತ್ತರ, ಗಮನ ಸೆಳೆಯುವ ಸೂಚನೆಗಳು, ಮಸೂದೆಗಳ ಮಂಡನೆ, ನೂತನ ವಿಧಾನಸಭಾ ಅಧ್ಯಕ್ಷರ ನೇಮಕಕ್ಕೆ ಚುನಾವಣೆ ಪ್ರಸ್ತಾವ , ಅರ್ಧ ಗಂಟೆ ಕಾಲಾವಧಿ ಚರ್ಚೆ, ಶೂನ್ಯ ವೇಳೆ, ನಿಯಮ 69 ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ, ಅಧಿಕೃತ ನಿರ್ಣಯಗಳು, ವರದಿಗಳನ್ನು ಒಪ್ಪಿಸುವುದು ಸೇರಿದಂತೆ ಕಾರ್ಯಕಲಾಪಗಳ ಪಟ್ಟಿ ಸಿದ್ಧಪಡಿಸಲು ಜಯಚಂದ್ರ ಅವರು ಗಮನವಹಿಸಲಿದ್ದಾರೆ.

ಮುಂಗಾರು ಮಳೆ ಸಕಾಲಕ್ಕೆ ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುವಿಕೆ, ಬಿಡದಿ ಟೌನ್ ಷಿಪ್ ವಿಷಯಗಳು ಸದನಗಳಲ್ಲಿ ತೀವ್ರ ಚರ್ಚೆಯಾಗುವ ನಿರೀಕ್ಷೆಗಳಿವೆ.

16ನೇ ವಿಧಾನಸಭೆಯ ಎಂಟನೇ ಅಧಿವೇಶನವನ್ನು ಯಶಸ್ವಿಯಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನ ಸೋಮವಾರದಿಂದ ಆರಂಭಿಸುವುದಾಗಿ ಟಿ.ಬಿ ಜಯಚಂದ್ರ ಅವರು ತಿಳಿಸಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ