ಸೇವೆ, ಕಾಮಗಾರಿ ಕುರಿತ ದೂರು ದಾಖಲಿಸಲು ಆನ್‌ಲೈನ್ ವ್ಯವಸ್ಥೆ: ಈಶ್ವರ ಖಂಡ್ರೆ

ಸೇವೆ, ಕಾಮಗಾರಿ ಕುರಿತ ದೂರು ದಾಖಲಿಸಲು ಆನ್‌ಲೈನ್ ವ್ಯವಸ್ಥೆ: ಈಶ್ವರ ಖಂಡ್ರೆ

ಸೇವೆ, ಕಾಮಗಾರಿ ಕುರಿತ ದೂರು ದಾಖಲಿಸಲು ಆನ್‌ಲೈನ್ ವ್ಯವಸ್ಥೆ: ಈಶ್ವರ ಖಂಡ್ರೆ

ಬೆಂಗಳೂರು: ಗ್ರಾಮ ಪಂಚಾಯತಿ ಸೇವೆಗಳಿಗೆ ಸಂಬಂಧಿಸಿದಂತೆ ತಮ್ಮ ಅಹವಾಲುಗಳನ್ನು ದಾಖಲಿಸಲು ಗ್ರಾಮೀಣ ಭಾಗದ ಜನರಿಗೆ ಅನುವಾಗುವಂತೆ ಡ್ಯಾಷ್ ಬೋರ್ಡ್ ಆಧಾರಿತ ‘ದೂರು ದಾಖಲು- ಇತ್ಯರ್ಥಕ್ಕೆ ಆನ್ ಲೈನ್ ವ್ಯವಸ್ಥೆ’ ರೂಪಿಸುವಂತೆ ಇಲಾಖೆಯ ಕಾರ್ಯದರ್ಶಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ಈ ಸಂಬಂಧ ಲಿಖಿತ ಸೂಚನೆ ನೀಡಿರುವ ಖಂಡ್ರೆ, 'ಇ-ಸ್ವತ್ತು, ತೆರಿಗೆ ನಿರ್ಧರಣೆ, ಸಾಮಾಜಿಕ ಅರಣ್ಯೀಕರಣ, ಗ್ರಾಮ‌ ಪಂಚಾಯಿತಿ ವ್ಯಾಪ್ತಿಯ ಕೆರೆ ನಿರ್ವಹಣೆ, ಕೆರೆ ಒತ್ತುವರಿ, ಜೆಜೆಎಂ, ಕುಡಿಯುವ ನೀರಿನ ಸಮಸ್ಯೆ, ನೈರ್ಮಲ್ಯ, ಗ್ರಾಮೀಣ ರಸ್ತೆ, ವಿಬಿಜಿ ರಾಮ್ ಜಿ, ಗ್ರಾಮೀಣ ಆಸ್ತಿಗಳ ಸೃಜನೆ ಸೇರಿದಂತೆ ಯಾವುದೇ ಅಹವಾಲನ್ನು ಗ್ರಾಮೀಣರು ದಾಖಲಿಸಲು ಮತ್ತು ಅದಕ್ಕೆ ತಕ್ಷಣ ಸ್ಪಂದಿಸಲು ಈ ವ್ಯವಸ್ಥೆ ರೂಪಿಸಲು ನಿರ್ದೇಶನ ನೀಡಿದ್ದಾರೆ.

ರಾಜ್ಯದ ಸುಮಾರು ಅರ್ಧದಷ್ಟು ಜನಸಂಖ್ಯೆಯೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇರ ಸಂಪರ್ಕ ಹೊಂದಿದ್ದು, ಗ್ರಾಮೀಣರ ಕುಂದುಕೊರತೆಗೆ ಸ್ಪಂದಿಸುವುದು ಇಲಾಖೆಯ ಜವಾಬ್ದಾರಿಯಾಗಿದೆ ಎಂದು ಪತ್ರದಲ್ಲಿ ಸಚಿವರು ತಿಳಿಸಿದ್ದಾರೆ.

ಇಲಾಖೆಯಲ್ಲಿ ಪಾರದರ್ಶಕತೆ ತರಲು, ಕೇಂದ್ರ ಹಾಗೂ ರಾಜ್ಯ ಪ್ರಾಯೋಜಿತ ಯೋಜನೆ ಕಾಮಗಾರಿಗಳಲ್ಲಿನ ಲೋಪದೋಷ, ಮೂಲಸೌಕರ್ಯ ಗುಣಮಟ್ಟ ಕೊರತೆ, ಗ್ರಾಮ ಪಂಚಾಯತಿ‌ ಒದಗಿಸುವ ವಿವಿಧ ಸೇವೆಗಳಲ್ಲಿನ ವಿಳಂಬ, ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಚಿವಾಲಯಕ್ಕೆ ದೂರುಗಳು ಬರುತ್ತಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕರು, ಗ್ರಾಮೀಣರು ಈ ಸಂಬಂಧ ವಿಡಿಯೊ ಮತ್ತು ಫೋಟೊ ಸಹಿತ ದೂರು ದಾಖಲಿಸಲು ಮತ್ತು ಈ ದೂರಿಗೆ ಸಂಬಂಧಿಸಿದಂತೆ ಕ್ರಮ ವಹಿಸುವ ಅಧಿಕಾರಿಯ ದೂರವಾಣಿ, ಹೆಸರು ಇತ್ಯಾದಿ ಮಾಹಿತಿ ಪಡೆಯಲು ಮತ್ತು ದೂರಿನ ಸ್ಥಿತಿಗತಿ ಅರಿಯಲು ಮಿಗಿಲಾಗಿ ನಿಗದಿತ ಕಾಲಮಿತಿಯಲ್ಲಿ ದೂರುಗಳನ್ನು ಇತ್ಯರ್ಥಪಡಿಸಲು ಅನುಕೂಲ ಆಗುವಂತೆ ಸರಳ ಪ್ರಕ್ರಿಯೆಯ ಆ್ಯಪ್ ಮತ್ತು ಡ್ಯಾಷ್ ಬೋರ್ಡ್ ಸಹಿತ ವೆಬ್ ಪೋರ್ಟಲ್ ಅಭಿವೃದ್ಧಿ ಪಡಿಸಲು ಕ್ರಮ ವಹಿಸುವಂತೆ ಕಾರ್ಯದರ್ಶಿಗೆ ಅವರು ಸೂಚಿಸಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ