
ಉಡುಪಿ: ಡೇವಿಡ್ ಹತ್ಯೆ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು
ಉಡುಪಿ: ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನನ್ನು ವಶಕ್ಕೆ ಪಡೆದು ಕರೆತರುತ್ತಿದ್ದಾಗ ಆತ ಪರಾರಿಯಾಗಲು ಯತ್ನಿಸಿತ್ತು, ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ.
ಮುಂಬೈನ ಗ್ಯಾಂಗ್‌ಸ್ಟರ್ ಹಾಗೂ ಬಿಹಾರದ ಅನುಜ್ ಪಾಟೀಲ್ (35) ಪರಾರಿಯಾಗಲು ಯತ್ನಿಸಿದ ಆರೋಪಿ.
ಆರೋಪಿಯನ್ನು ಹೆಬ್ರಿ ಠಾಣಾ ವ್ಯಾಪ್ತಿಯಲ್ಲಿ ವಶಕ್ಕೆ ಪಡೆದು ಕರೆದುಕೊಂಡು ಬರುವ ಸಮಯದಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಕೊಲ್ಲೂರು ಠಾಣೆ ಪಿಎಸ್ಐ ವಿನಯ್ ಎಂಬುವವರ ಆಯುಧವನ್ನು ಕಸಿದು, ಗುಂಡು ಹಾರಿಸಿದ್ದಾನೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಈ ವೇಳೆ ಕುಂದಾಪುರ ಎಸ್ಐ ನಂಜ ನಾಯಕ ಅವರು ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ಹೇಳಿದ್ದಾರೆ.
ಡೇವಿಡ್ ಹತ್ಯೆಗಾಗಿ ಅನುಜ್ ಶೂಟರ್ ಗಳನ್ನು ಕಳುಹಿಸಿದ್ದ. ಆತ ಮುಂಬೈನಲ್ಲಿ ಕಾರ್ಯಾಚರಿಸುತ್ತಿದ್ದು , 2017 ರಿಂದ ತಲೆಮರೆಸಿಕೊಂಡಿದ್ದ. ಆತನ ವಿರುದ್ಧ ಮಹಾರಾಷ್ಟ್ರದಲ್ಲಿ ಮೋಕಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದ್ದಾರೆ.
ಆರೋಪಿ ಅನುಜ್ ವಿರುದ್ಧ ಒಟ್ಟು 11 ಪ್ರಕರಣಗಳು ದಾಖಲಾಗಿವೆ ಎಂದಿದ್ದಾರೆ. ಆರೋಪಿಯನ್ನು ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ.