ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಮೂವರು ಸಾವು

ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಮೂವರು ಸಾವು

ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಮೂವರು ಸಾವು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಟೋಲ್‌ಗೇಟ್ ಬಳಿ ಗುರುವಾರ ನಸುಕಿನಲ್ಲಿ ಲಾರಿ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟಿದ್ಧಾರೆ.

ದಾವಣಗೆರೆಯ ನಿಟವಳ್ಳಿ ಮೌನೇಶ್ವರ ಬಡಾವಣೆಯ ನಿವಾಸಿಗಳಾದ ಸಿದ್ದಾರ್ಥ (27), ಹಸನ್ಮುಖಿ (29) ಹಾಊ ಯಶೋಧಾ ಬಾಯಿ (51) ಮೃತರು. ಕಾರಿನಲ್ಲಿದ್ದ ಸೌಂದರ್ಯ, ಸಿಂಧು ಸೇರಿ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರಿಗೆ ದಾವಣಗೆರೆ ಎಸ್.ಎಸ್. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

'ಸಿದ್ಧಾರ್ಥ ಹಾಗೂ ಇತರರು ರಾಣೆಬೆನ್ನೂರಿನಿಂದ ದಾವಣಗೆರೆಗೆ ರಾಷ್ಟ್ರಿಯ ಹೆದ್ದಾರಿ ಮೂಲಕ ಕಾರಿನಲ್ಲಿ ಹೊರಟಿದ್ದರು. ಚಳಗೇರಿ ಟೋಲ್ ಗೇಟ್ ಸಮೀಪದಲ್ಲಿ ಲಾರಿಯೊಂದು ನಿಂತಿತ್ತು. ಅತೀ ವೇಗದಲ್ಲಿದ್ದ ಕಾರು, ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ. ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ' ಎಂದು ರಾಣೇಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ತಿಳಿಸಿದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ