ತಮಿಳುನಾಡು ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ

ತಮಿಳುನಾಡು ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ

ತಮಿಳುನಾಡು ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ

ಚೆನ್ನೈ: ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮರಿಮಂಗಳ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಎನ್‌ಕೌಂಟರ್‌ ನಡೆಸಿ ಮೂವರು ರೈತರನ್ನು ಕೊಂದಿರುವ ಘಟನೆ ತಮಿಳುನಾಡು ವಿಧಾನಸಭೆಯಲ್ಲೂ ಪ್ರತಿಧ್ವನಿಸಿತು. 

ಈ ಶೂಟೌಟ್ ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆಗೆ ಸದನದಲ್ಲಿ ಸದಸ್ಯರು ಒತ್ತಾಯಿಸಿದ್ದಾರೆ.

ಕಾವೇರಿ ವನ್ಯಧಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹಾರಿಸಿದ ಗುಂಡಿನಿಂದ ಮೃತಪಟ್ಟ ಆಂಥೋಣಿ ಸ್ವಾಮಿ, ಕುಮಾರ್ ಹಾಗೂ ಪೀಟರ್ ಅಂತ್ಯಕ್ರಿಯೆ ಸೋಮವಾರ ಸ್ವಗ್ರಾಮಗಳಲ್ಲಿ ನೆರವೇರಿತು.

ಘಟನೆಯ ಬೆನ್ನಲ್ಲೇ ಹೇಳಿಕೆ ನೀಡಿದ್ದ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್, ಈ ಕ್ರೂರ ಹತ್ಯೆಯನ್ನು ತೀವ್ರವಾಗಿ ಖಂಡಿಸಿದ್ದರಲ್ಲದೆ ಕರ್ನಾಟಕ ಅರಣ್ಯ ಇಲಾಖೆ ನೀಡಿದ ವಿವರಣೆಯನ್ನು ಒಪ್ಪಲಾಗದು ಎಂದು ಹೇಳಿದ್ದಾರೆ. 

ಈ ಭೀಕರ ಘಟನೆಯ ಕುರಿತು ಉನ್ನತ ಮಟ್ಟದ ಸಮಿತಿಯಿಂದ ನ್ಯಾಯಯುತವಾದ ತನಿಖೆ ನಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ. 

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ