ಕೊಪ್ಪಳ: ತುಂಗಭದ್ರಾ ನೀರು ಸಿಗುವ ನಿರೀಕ್ಷೆಯಲ್ಲಿ ರೈತರು

ಕೊಪ್ಪಳ: ತುಂಗಭದ್ರಾ ನೀರು ಸಿಗುವ ನಿರೀಕ್ಷೆಯಲ್ಲಿ ರೈತರು

ಕೊಪ್ಪಳ: ತುಂಗಭದ್ರಾ ನೀರು ಸಿಗುವ ನಿರೀಕ್ಷೆಯಲ್ಲಿ ರೈತರು

ಕೊಪ್ಪಳ: ಕೃಷಿ ಚಟುವಟಿಕೆಗೆ ಆಧಾರವಾಗಿರುವ ತುಂಗಭದ್ರಾ ಜಲಾಶಯದ ನೀರು ಕಾಲುವೆಗೆ ಹರಿಸುವ ಕುರಿತು ಚರ್ಚಿಸಲು ತಾಲ್ಲೂಕಿನ ಮುನಿರಾಬಾದ್‌ನಲ್ಲಿ ಮಂಗಳವಾರ 126ನೇ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆ ಮಧ್ಯಾಹ್ನ 3.30ಕ್ಕೆ ನಿಗದಿಯಾಗಿದ್ದು ಕಾಲುವೆಗಳಿಗೆ ನೀರು ಹರಿಸುವ ತೀರ್ಮಾನ ಕೈಗೊಳ್ಳಲಾಗುವುದೇ ಎನ್ನುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. 

ಸಭೆಯ ದಿನದಂದು ಜಲಾಶಯದಲ್ಲಿರುವ ನೀರಿನ ಒಟ್ಟು ಲಭ್ಯತೆ, ಡೆಡ್‌ ಸ್ಟೋರೇಜ್‌, ಆವಿಯಾಗುವ ಪ್ರಮಾಣ, ಕುಡಿಯಲು ಬೇಕಾಗುವ ನೀರು, ಕರ್ನಾಟಕ, ಆಂಧ್ರ, ತೆಲಂಗಾಣ ರಾಜ್ಯಗಳ ಪಾಲು ಹಂಚಿಕೆ ಈ ಎಲ್ಲಾ ಲೆಕ್ಕಾಚಾರದ ಬಳಿಕ ಕೃಷಿ ಚಟುವಟಿಕೆಗೆ ನೀರು ಹರಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ಈಗಿರುವ ನೀರಿನ ಪ್ರಕಾರ ಒಂದು ಬೆಳೆಗೆ ನೀರು ಹರಿಸಬಹುದು ಎಂದು ಮೂಲಗಳು ತಿಳಿಸಿವೆ. 

ಒಟ್ಟು 105.788 ಟಿಎಂಸಿ ಅಡಿ ನೀರು ಸಂಗ್ರಹಣಾ ಸಾಮರ್ಥ್ಯದ ಜಲಾಶಯದಲ್ಲಿ ಮಂಗಳವಾರ ಬೆಳಿಗ್ಗೆ ಅಂತ್ಯಕ್ಕೆ 82.599 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. 39,569 ಕ್ಯುಸೆಕ್‌ ಒಳಹರಿವು ಇದ್ದು ರೈತರಲ್ಲಿ ಭರವಸೆ ಮೂಡಿಸಿದೆ.

ಸಚಿವ ಶಿವರಾಜ ತಂಗಡಗಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು, ಜನಪ್ರತಿನಿಧಿಗಳು ಪಾಲ್ಗೊಳ್ಳುವರು. ಈ ಸಭೆಗೂ ಮೊದಲು ತಂಗಡಗಿ ಅವರು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಅಧಿಕಾರಿಗಳ ಜೊತೆ ಸಭೆ ನಡೆಸಿ ಸಾಧಕ–ಬಾಧಕಗಳ ಬಗ್ಗೆ ಚರ್ಚೆ ನಡೆಸುವರು.

ತುಂಗಭದ್ರಾ ಜಲಾಶಯವು ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣದ ಸುಮಾರು 12 ಲಕ್ಷ ಎಕರೆಗೂ ಅಧಿಕ ಕೃಷಿ ಭೂಮಿಗೆ ಜೀವನಾಡಿಯಾಗಿದೆ. ಆದ್ದರಿಂದ ಈ ಸಭೆ ಮಹತ್ವ ಪಡೆದುಕೊಂಡಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ