
ಕಾವೇರಿ ಹೋರಾಟ |ಬಸ್ ತಡೆಯಲು ಯತ್ನ: ಕರ್ನಾಟಕ ಸೇನಾ ಪಡೆ ಸದಸ್ಯರು ಪೊಲೀಸ್ ವಶಕ್ಕೆ
ಮೈಸೂರು: ಬಸ್ ತಡೆಯಲು ಯತ್ನಿಸಿದ ಕರ್ನಾಟಕ ಸೇನಾ ಪಡೆ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದರು.
ನಗರದ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ ಜಮಾಯಿಸಿದ ಪ್ರತಿಭಟನಾಕಾರರು 'ಕಾವೇರಿ ನಮ್ಮದು' ಎಂದು ಘೋಷಣೆ ಕೂಗಿದರು. ತಮಿಳುನಾಡಿಗೆ ನೀರು ಬಿಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಘೋಷಣೆ ಕೂಗುತ್ತಾ ಬೆಂಗಳೂರು ತೆರಳುವ ಕೆಎಸ್‌ಆರ್‌ಟಿಸಿ ಬಸ್ ಗಳನ್ನು ತಡೆಯಲು ಯತ್ನಿಸಿದರು. ರಸ್ತೆಗೆ ಅಡ್ಡಲಾಗಿ ಕುಳಿತು ಘೋಷಣೆಕೂಗಿದರು. ತಕ್ಷಣವೇ ಪೊಲೀಸರು ಪ್ರತಿಭಟನಾಕಾರರನ್ನುವಶಕ್ಕೆ ಪಡೆದು, ಸಿಎಆರ್ ಮೈದಾನಕ್ಕೆ ಕರೆದೊಯ್ದರು.