ನೈಸ್ ಯೋಜನೆ; ಕಾನೂನು ಹೇಳಿದಂತೆ ನಡೆಯುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ʼನೈಸ್ ಯೋಜನೆಗೆ ಸಂಬಂಧಿಸಿದಂತೆ ಕಾನೂನು ಏನು ಹೇಳುತ್ತದೆಯೋ ಹಾಗೆ ನಾವು ನಡೆದುಕೊಳ್ಳುತ್ತೇವೆ' ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ನೈಸ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗೆ ಬರೆದಿರುವ ಪತ್ರದ ಬಗ್ಗೆ ಕೇಳಿದಾಗ, 'ಅವರು ಪತ್ರ ಬರೆದಿರುವುದು ನಿಜ. ಪತ್ರ ಇನ್ನು ಓದಿಲ್ಲ. ಓದಿ, ವಿಚಾರ ತಿಳಿದು ಕಾನೂನಿನ ಚೌಕಟ್ಟಿನಲ್ಲಿ ಮಾಡಬಹುದಾದ ಕೆಲಸಗಳ ಬಗ್ಗೆ ಪರಿಶೀಲನೆ ನಡೆಸುತ್ತೇನೆ' ಎಂದರು.