ಭಾರತದ ಚುನಾವಣಾ ವ್ಯವಸ್ಥೆಯನ್ನು ಶ್ಲಾಘಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಭಾರತದ ಚುನಾವಣಾ ವ್ಯವಸ್ಥೆಯನ್ನು ಶ್ಲಾಘಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಭಾರತದ ಚುನಾವಣಾ ವ್ಯವಸ್ಥೆಯನ್ನು ಶ್ಲಾಘಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಅಮೆರಿಕದಲ್ಲಿ ಕಟ್ಟುನಿಟ್ಟಾದ ಚುನಾವಣಾ ಕಾನೂನುಗಳ ಅಗತ್ಯವನ್ನು ಪ್ರತಿಪಾದಿಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದ ಚುನಾವಣಾ ವ್ಯವಸ್ಥೆಯನ್ನು ಶ್ಲಾಘಿಸಿದ್ದಾರೆ. ಅಲ್ಲದೆ, ಅಮೆರಿಕದ ಚುನಾವಣೆಗಳಲ್ಲಿ ಮತದಾರರ ಗುರುತಿನ ಚೀಟಿ ಇಲ್ಲದಿರುವುದನ್ನು ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪ್ರಶ್ನಿಸಿರುವುದನ್ನು ಅವರು ಸ್ಮರಿಸಿದ್ದಾರೆ.

ಈ ಕುರಿತು ‘ಟ್ರೂಥ್ ಸೋಶಿಯಲ್’ನಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ‘ಭಾರತದಲ್ಲಿ ಇತ್ತೀಚೆಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ 64.6 ಕೋಟಿಗೂ ಹೆಚ್ಚು ಜನರು ಪಾಲ್ಗೊಂಡಿದ್ದರು, ಆದಾಗ್ಯೂ ಶೇ.1ಕ್ಕಿಂತ ಕಡಿಮೆ ಜನರು ಅಂಚೆ ಮತಪತ್ರಗಳ ಮೂಲಕ ಮತ ಚಲಾಯಿಸಿದ್ದಾರೆ’ ಎಂದು ಹೇಳಿದ್ದಾರೆ.

'ಸೇವ್ ಅಮೆರಿಕ ಕಾಯ್ದೆ'ಗೆ ಬೆಂಬಲವನ್ನು ಕೋರುವ ವೇಳೆ ಮಾತನಾಡಿದ ಟ್ರಂಪ್, ‘ಈ ಕಾಯ್ದೆಯು ಅಮೆರಿಕನ್ನರು ಮತದಾನಕ್ಕೆ ನೋಂದಾಯಿಸಿಕೊಳ್ಳಲು ಪೌರತ್ವದ ಸಾಕ್ಷ್ಯವನ್ನು ತೋರಿಸುವುದನ್ನು ಕಡ್ಡಾಯಗೊಳಿಸುತ್ತದೆ, ದೇಶದಾದ್ಯಂತ ಮತದಾರರ ಗುರುತಿನ ಚೀಟಿ ಕಡ್ಡಾಯ ಮಾಡುತ್ತದೆ ಮತ್ತು ಅಂಚೆ ಮೂಲಕ ಮತದಾನ ಮಾಡುವುದನ್ನು ನಿಯಂತ್ರಿಸುತ್ತದೆ’ ಎಂದು ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರು ತಮ್ಮ ಆಡಳಿತದ ಅಧಿಕಾರಿಗಳೊಂದಿಗೆ ಮಾತನಾಡಿದ್ದು, ಭಾವಚಿತ್ರವಿರುವ ಗುರುತಿನ ಚೀಟಿ ಇಲ್ಲದೆ ಅಮೆರಿಕದಲ್ಲಿ ಚುನಾವಣೆಗಳನ್ನು ಹೇಗೆ ನಡೆಸಲು ಸಾಧ್ಯ ಎಂದು ಪ್ರಶ್ನಿಸಿದ್ದರು ಎಂದು ಟ್ರಂಪ್ ಹೇಳಿದ್ದಾರೆ.

ಚುನಾವಣಾ ಅಕ್ರಮಗಳನ್ನು ತಡೆಯಲು 'ಸೇಫ್‌ಗಾರ್ಡ್ ಅಮೆರಿಕನ್ ವೋಟರ್ ಎಲಿಜಿಬಿಲಿಟಿ(ಎಸ್‌ಎವಿಇ) ಕಾಯ್ದೆಯನ್ನು ಜಾರಿಗೊಳಿಸಬೇಕಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ಆದರೆ, 'ಸೇವ್ ಅಮೆರಿಕ ಕಾಯ್ದೆ'ಯ ವಿಷಯದಲ್ಲಿ ಡೆಮಾಕ್ರಟ್‌ ಮತ್ತು ರಿಪಬ್ಲಿಕನ್‌ ನಡುವೆ ಭಿನ್ನಾಭಿಪ್ರಾಯವಿದೆ. ಹಾಗಾಗಿ, ಅಮೆರಿಕದ ಸೆನೆಟ್‌ನಲ್ಲಿ ಈ ಕಾಯ್ದೆ ಅಂಗೀಕಾರಕ್ಕೆ ಯಾವುದೇ ನಿರ್ದಿಷ್ಟ ಕ್ರಮ ಕೈಗೊಳ್ಳದೆ, ಇದನ್ನು ಐದು ವಾರ ಮುಂದೂಡಿದೆ.

ವೈಟ್‌ಹೌಸ್‌ ವೆಬ್‌ಸೈಟ್‌ನಲ್ಲಿರುವ 'ಸೇವ್ ಅಮೆರಿಕ ಕಾಯ್ದೆ'ಯ ಮಾಹಿತಿ ಪತ್ರದಲ್ಲಿ, ಭಾರತ ಮತ್ತು ಬ್ರೆಜಿಲ್ ಈಗಾಗಲೇ ಮತದಾರರ ಗುರುತಿನ ಚೀಟಿಯನ್ನು ಬಯೋಮೆಟ್ರಿಕ್ ಡೇಟಾಬೇಸ್‌ಗೆ ಲಿಂಕ್ ಮಾಡಿವೆ, ಆದರೆ ಅಮೆರಿಕವು ಇಂದಿಗೂ ಮತದಾರರ ಸ್ವಯಂ-ದೃಢೀಕರಣವನ್ನು ನೆಚ್ಚಿಕೊಂಡಿದೆ ಎಂದು ಉಲ್ಲೇಖಿಸಲಾಗಿದೆ. ಈ ವಿಧೇಯಕವು ಮಹಿಳೆಯರ ಕ್ರೀಡೆಗಳಲ್ಲಿ ಪುರುಷರು ಸ್ಪರ್ಧಿಸುವುದನ್ನು ಶಾಶ್ವತವಾಗಿ ನಿಷೇಧಿಸಲು ಮತ್ತು ಮಕ್ಕಳಿಗೆ ತೃತೀಯಲಿಂಗಿ ಶಸ್ತ್ರಚಿಕಿತ್ಸೆಯನ್ನು ನಿಷೇಧಿಸಲು ಉದ್ದೇಶಿಸಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ