ವಾಡಿ ಆಸ್ಪತ್ರೆ: ಮೂಲೆಗುಂಪಾದ ಕ್ಷ–ಕಿರಣ ಯಂತ್ರ!

ವಾಡಿ ಆಸ್ಪತ್ರೆ: ಮೂಲೆಗುಂಪಾದ ಕ್ಷ–ಕಿರಣ ಯಂತ್ರ!

ವಾಡಿ ಆಸ್ಪತ್ರೆ: ಮೂಲೆಗುಂಪಾದ ಕ್ಷ–ಕಿರಣ ಯಂತ್ರ!

ವಾಡಿ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕ್ಷ–ಕಿರಣ ಯಂತ್ರದ (ಎಕ್ಸ್‌ರೇ) ಸೌಲಭ್ಯ ಇಲ್ಲದ ಕಾರಣ ಸಾರ್ವಜನಿಕರು ಮತ್ತು ಬಡ ರೋಗಿಗಳು ಪರದಾಡುವಂತಾಗಿದೆ.

ರಾಷ್ಟ್ರೀಯ ಹೆದ್ದಾರಿ 150ಕ್ಕೆ ಹೊಂದಿಕೊಂಡಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗಂಭೀರ ಸಮಸ್ಯೆ ಹೊತ್ತು ಬರುವ ರೋಗಿಗಳು ಸೌಲಭ್ಯದ ಕೊರತೆಯಿಂದ ತತ್ತರಿಸುತ್ತಿದ್ದಾರೆ. ಆಸ್ಪತ್ರೆಯಲ್ಲಿ ಇದ್ದ ಎಕ್ಸ್‌ರೇ ಯಂತ್ರ ಎರಡು ವರ್ಷಗಳಿಂದ ಕೆಟ್ಟು ಮೂಲೆ ಸೇರಿದೆ. ಇದರಿಂದ ಇಲ್ಲಿರುವ ಸಿಬ್ಬಂದಿಯನ್ನು ಚಿತ್ತಾಪುರ ತಾಲ್ಲೂಕು ಆಸ್ಪತ್ರೆಗೆ ನಿಯೋಜಿಸಲಾಗಿದೆ.

50 ಸಾವಿರ ಜನಸಂಖ್ಯೆ ಹೊಂದಿರುವ ವಾಡಿ ಪಟ್ಟಣ ಮತ್ತು ಸುತ್ತಲಿನ 15ಕ್ಕೂ ಅಧಿಕ ಹಳ್ಳಿಗಳ ಸಾವಿರಾರು ಜನರಿಗೆ ಆಸರೆಯಾಗಿರುವ ಈ ಆಸ್ಪತ್ರೆಯಲ್ಲಿ ಎಕ್ಸ್‌ರೇ ಅಂತಹ ಅಗತ್ಯ ಸೌಲಭ್ಯವೇ ಇಲ್ಲದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಅಪಘಾತಕ್ಕೊಳಗಾದವರು, ಮೂಳೆ ಮುರಿತ ಹಾಗೂ ಎದೆನೋವಿನ ಸಮಸ್ಯೆಯಿಂದ ಬರುವ ರೋಗಿಗಳು ಎಕ್ಸ್-ರೇ ಮಾಡಿಸಿಕೊಳ್ಳಲು ಬಂದರೆ ಆಸ್ಪತ್ರೆಯಲ್ಲಿ ಸೌಲಭ್ಯವಿಲ್ಲದ ಕಾರಣ, ವೈದ್ಯರು ರೋಗಿಗಳನ್ನು ಖಾಸಗಿ ಡಯಾಗ್ನೋಸ್ಟಿಕ್ ಸೆಂಟರ್‌ಗಳಿಗೆ ಕಳುಹಿಸಲಾಗುತ್ತಿದೆ. ಇದರಿಂದಾಗಿ ಬಡ ರೋಗಿಗಳು ಸಾವಿರಾರು ರೂಪಾಯಿ ಖರ್ಚು ಮಾಡಿ ಖಾಸಗಿ ಕೇಂದ್ರಗಳಲ್ಲಿ ಎಕ್ಸ್-ರೇ ಮಾಡಿಸಿಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ.

‘ಆಸ್ಪತ್ರೆಗೆ ಬಂದರೆ ಇಲ್ಲಿ ಎಕ್ಸ್-ರೇ ಇಲ್ಲವೆಂದು ಹೊರಗಡೆ ಕಳುಹಿಸುತ್ತಾರೆ. ಖಾಸಗಿಯವರ ಬಳಿ ಹೋಗಲು ನಮ್ಮ ಹತ್ತಿರ ಅಷ್ಟೊಂದು ಹಣವಿಲ್ಲ. ಸರ್ಕಾರಿ ಆಸ್ಪತ್ರೆ ಇದ್ದೂ ನಮಗೆ ಯಾವುದೇ ಪ್ರಯೋಜನವಾಗುತ್ತಿಲ್ಲ’ ಎಂದು ಸ್ಥಳೀಯ ರೋಗಿಯೊಬ್ಬರು ‘ಪ್ರಜಾವಾಣಿ’ ಎದುರು ತಮ್ಮ ಅಳಲು ತೋಡಿಕೊಂಡರು.

‘ನಮ್ಮ ಹುಡುಗ ಈಚೆಗೆ ದ್ವಿಚಕ್ರ ವಾಹನದಿಂದ ಬಿದ್ದು ಗಾಯ ಮಾಡಿಕೊಂಡಿದ್ದ. ತಕ್ಷಣ ಸರ್ಕಾರಿ ಆಸ್ಪತ್ರೆಗೆ ಹೋದರೆ ಎಕ್ಸ್‌ರೇ ಇಲ್ಲ. ಕೇಳಿದರೆ ತಾಲ್ಲೂಕು ಆಸ್ಪತ್ರೆ ಅಥವಾ ಖಾಸಗಿಯವರ ಕಡೆ ಮಾಡಿಸಿ ಎಂದು ಹೇಳಿದರು. ಸಾವಿರಾರು ರೂಪಾಯಿ ಖರ್ಚು ಮಾಡಿ ಖಾಸಗಿಯವರ ಬಳಿ ಎಕ್ಸ್‌ ರೇ ಮಾಡಿಸಿಕೊಂಡು ಬಂದಿದ್ದೇನೆ’ ಎಂದು ಬಿಯಾಬಾನಿ ಬಡಾವಣೆ ನಿವಾಸಿ ರಫೀಕ್‌ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿಗಳು ತಕ್ಷಣ ಸಮಸ್ಯೆಗೆ ಸ್ಪಂದಿಸಿ ಸಮುದಾಯ ಆಸ್ಪತ್ರೆಗೆ ಹೊಸ ಡಿಜಿಟಲ್ ಎಕ್ಸ್-ರೇ ಯಂತ್ರ ಒದಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260827-31-1196935649

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ