ಮುಂಗಾರು ಚುರುಕು; ಜೋಗ ಜಲಪಾತದ ರಾಜಾ, ರಾಣಿ, ರೋರರ್, ರಾಕೆಟ್‌ಗಳ ಸೌಂದರ್ಯಕ್ಕೆ ಮರುಳಾದ ಪ್ರವಾಸಿಗರು

ಮುಂಗಾರು ಚುರುಕು; ಜೋಗ ಜಲಪಾತದ ರಾಜಾ, ರಾಣಿ, ರೋರರ್, ರಾಕೆಟ್‌ಗಳ ಸೌಂದರ್ಯಕ್ಕೆ ಮರುಳಾದ ಪ್ರವಾಸಿಗರು

ಮುಂಗಾರು ಚುರುಕು; ಜೋಗ ಜಲಪಾತದ ರಾಜಾ, ರಾಣಿ, ರೋರರ್, ರಾಕೆಟ್‌ಗಳ ಸೌಂದರ್ಯಕ್ಕೆ ಮರುಳಾದ ಪ್ರವಾಸಿಗರು

Jog Falls: ರಾಜ್ಯದ ಹಲವೆಡೆ ಇದೀಗ ಮುಂಗಾರು ಚುರುಕು ಪಡೆದಿದ್ದು, ಜಲಮೂಲಗಳಿಗೆ ಜೀವಕಳೆ ಬಂದಂತಾಗಿದೆ. ಹಾಗೆಯೇ ಇದೀಗ ಮಲೆನಾಡಿನ ಹೆಬ್ಬಾಗಿಲು ಅಂತಲೇ ಪ್ರಸಿದ್ಧ ಪಡೆದಿರುವ ಶಿವಮೊಗ್ಗ ಜಿಲ್ಲೆಯಲ್ಲಿರುವ ವಿಶ್ವಪ್ರಸಿದ್ಧ ಜೋಗ ಜಲಪಾತ ಧುಮ್ಮಿಕ್ಕುತ್ತಿದೆ. ಈ ಸುಂದರ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಇದನ್ನು ಸವಿಯಲು ಪ್ರವಾಸಿಗರ ದಂಡೇ ಹರಿದುಬರುತ್ತಿದೆ.

ಕಳೆದ ಕೆಲವು ದಿನಗಳಿಂದ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಜಲಮೂಲಗಳು ಭರ್ತಿಯಾಗಿದ್ದು, ಇದರಿಂದ ಇಲ್ಲಿನ ರೈತರ ಮುಖದಲ್ಲಿ ಮಂದಹಾಸ ಮನೆ ಮಾಡಿದೆ. ಜೊತೆಗೆ ಪ್ರವಾಸಿ ತಾಣಗಳಿಗೂ ಕಳೆ ಬಂದಂತಾಗಿದೆ. ಅದರಲ್ಲೂ ವಿಶ್ವಪ್ರಸಿದ್ಧ ಜೋಗ ಜಲಪಾತವು ಧುಮ್ಮಿಕ್ಕುತ್ತಿದ್ದು, ಈ ದೃಶ್ಯವನ್ನು ಹತ್ತಿರದಿಂದ ಸವಿಯಲು ಪ್ರವಾಸಿಗರ ದಂಡು ಹರಿದುಬರುತ್ತಿದೆ.

ಶರಾವತಿ ನದಿಯ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನದಿಯು ಮೈದುಂಬಿ ಹರಿಯುತ್ತಿದ್ದು, ಜೋಗದ ಸೌಂದರ್ಯವು ಇಮ್ಮಡಿಗೊಂಡಿದೆ. ಸಾಮಾನ್ಯವಾಗಿ ಪ್ರತಿ ವರ್ಷ ಮುಂಗಾರು ಮಳೆ ಚುರುಕುಗೊಂಡಾಗ ಜೋಗ ಜಲಪಾತಕ್ಕೆ ಹೊಸ ಕಳೆ ಬರುತ್ತದೆ.

ಪ್ರಕೃತಿಯ ಈ ಅದ್ಭುತ ಸೃಷ್ಟಿಯಲ್ಲಿ ಬಂಡೆಕಲ್ಲುಗಳ ಮೇಲಿಂದ ಧುಮ್ಮಿಕುವ ರಾಜಾ, ರಾಣಿ, ರೋರರ್ ಮತ್ತು ರಾಕೆಟ್ ಎಂಬ ನಾಲ್ಕು ಪ್ರಸಿದ್ಧ ಜಲಧಾರೆಗಳು ಒಂದಾಗಿ ಹರಿಯುವ ಮನಮೋಹಕ ದೃಶ್ಯ ಪ್ರವಾಸಿಗರನ್ನು ತನ್ನತ್ತ ಕೈಬೀಸಿ ಕರೆಯುತ್ತಿದೆ. ಈ ಬಾರಿಯೂ ಉತ್ತಮ ಮಳೆ ಆಗಿರುವುದರಿಂದ ಜಲಪಾತವು ವೈಭವದೊಂದಿಗೆ ಧುಮುಕುತ್ತಿದೆ.

ಮಳೆಯ ನಡುವೆಯೂ ಈ ಅದ್ಭುತ ದೃಶ್ಯವನ್ನು ಕಣ್ತುಂಬಿಕೊಳ್ಳಲು ರಾಜ್ಯದ ವಿವಿಧ ಭಾಗಗಳಿಂದ ಪ್ರವಾಸಿಗರು ತಂಡೋಪತಂಡವಾಗಿ ಜೋಗದತ್ತ ಆಗಮಿಸುತ್ತಿದ್ದಾರೆ. ಜಲಪಾತದ ಸುಂದರ ದೃಶ್ಯವು ಪ್ರವಾಸಿಗರಿಗೆ ಹೊಸ ಅನುಭವ ನೀಡುತ್ತಿದೆ. ಅದರಲ್ಲೂ ವಾರಾಂತ್ಯದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಲಿದೆ.

jog falls karnataka travel tourists

jog falls karnataka travel tourists

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ