ಸಮಟಗಾರು ಶಾಲೆ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ

ಸಮಟಗಾರು ಶಾಲೆ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ

ಸಮಟಗಾರು ಶಾಲೆ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ

ಹೊಸನಗರ: ಸೆಪ್ಟೆಂಬರ್‌ 5ರ ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವಾಲಯವು ಪ್ರಸಕ್ತ ವರ್ಷದಲ್ಲಿ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕರ ಪಟ್ಟಿಯನ್ನು (National Teachers Award List) ಪ್ರಕಟಿಸಿದೆ.

ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರ ಪೈಕಿ ಕರ್ನಾಟಕದಿಂದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಂಚ ಗ್ರಾ‌ಮ ಪಂಚಾಯಿತಿ ವ್ಯಾಪ್ತಿಯ ಸಮಟಗಾರು ಶಿಕ್ಷಕಿ ರತ್ನ ಕುಮಾರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ತಾಲ್ಲೂಕಿನ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಲವು ವರ್ಷಗಳಿಂದ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ರತ್ನಕುಮಾರಿ ಅವರಿಗೆ ಈ ವರ್ಷದ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ ಒಲಿದುಬಂದಿರುವುದು ತಾಲ್ಲೂಕಿನ ಶಿಕ್ಷಣ ಕ್ಷೇತ್ರಕ್ಕೆ ಹೆಮ್ಮೆ ಎನಿಸಿದೆ.

ಸೆಪ್ಟೆಂಬರ್ 5ರಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು ಪ್ರಮಾಣಪತ್ರ, 50 ಸಾವಿರ ರೂ. ನಗದು ಹಾಗೂ ಬೆಳ್ಳಿಯ ಪದಕವನ್ನು ಒಳಗೊಂಡಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ